ಮೈಸೂರು: ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕುಂದಾಪುರದ ಕಾಲೇಜಿಗೆ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿದ್ದೇಕೆ ಎಂಬುದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್, ಕುಂದಾಪುರದಲ್ಲಿ ಇಂದು(ಸೋಮವಾರ) ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆದರೆ, ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳೂ ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಅವರ ಮುಗ್ಧತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದರು.
ನ್ಯಾಯಾಲಯದ ಆದೇಶವನ್ನು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ. ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲಾ-ಕಾಲೇಜಿಗೆ ಬರಬೇಕು. ಶಾಲಾ ಆವರಣದ ಗೇಟ್ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ಧ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೊಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತಹದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ಬಿ.ಸಿ. ನಾಗೇಶ್ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…