ಮೈಸೂರು: ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕುಂದಾಪುರದ ಕಾಲೇಜಿಗೆ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿದ್ದೇಕೆ ಎಂಬುದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್, ಕುಂದಾಪುರದಲ್ಲಿ ಇಂದು(ಸೋಮವಾರ) ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆದರೆ, ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳೂ ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಅವರ ಮುಗ್ಧತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದರು.
ನ್ಯಾಯಾಲಯದ ಆದೇಶವನ್ನು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ. ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲಾ-ಕಾಲೇಜಿಗೆ ಬರಬೇಕು. ಶಾಲಾ ಆವರಣದ ಗೇಟ್ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ಧ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೊಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತಹದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ಬಿ.ಸಿ. ನಾಗೇಶ್ ಹೇಳಿದರು.
ಕುಂದಾಪುರ : ದೇವಸ್ಥಾನದಲ್ಲಿ ಮಹಿಳೆಯ ಕರಿಮಣಿ ಸರ ಕಳವು ಪ್ರಕರಣ ; ನಾಲ್ವರು ಮಹಿಳೆಯರ ಸಹಿತ ಐವರ ಬಂಧನ ಕುಂದಾಪುರ:…
ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ ಮಂಗಳೂರು : ಸೌಜನ್ಯಾ ಪ್ರಕರಣದಲ್ಲಿ…
ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ ಬೆಂಗಳೂರು:…
ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಡಿ.1ರಿಂದ ದೇಶಾದ್ಯಂತ ಬಿಜೆಪಿಯ 'ಸೇವಾ ದೂತ’ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ…
ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಉಡುಪಿ : ಕಾರ್ಕಳ ಶ್ರೀವೆಂಕಟರಮಣ…
ಉಡುಪಿ : ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ…