Featured

ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ, ಇದರ ವಿರುದ್ಧ ಹೋರಾಟ ಮಾಡಿ; ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ : ಶಿಕ್ಷಣ ಸಚಿವ ಬಿ.ಸಿ. ನಾಗೇಶ್ – VIshwanews24

ನಿಮ್ಮ ಮಸೀದಿಯಲ್ಲಿ ನಿಮ್ಗೆ ಪ್ರವೇಶವಿಲ್ಲ, ಹಕ್ಕಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆಯಲ್ಲಿ ಹೋರಾಟ ಮಾಡ್ಬೇಡಿ..

ಹಿಜಾಬ್ ಕೇಸರಿ ಶಾಲು, ಹಸಿರು ಶಾಲು  ಧರಿಸಿ ಬಂದವರಿಗೆ ಪಾಠ ತರಗತಿ ಇಲ್ಲ..

ಪ್ರತ್ಯೇಕ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳೂ ನಡೆಯುತ್ತಿಲ್ಲ..

ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲಾ-ಕಾಲೇಜಿಗೆ ಬರಬೇಕು..

ಮೈಸೂರು: ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕುಂದಾಪುರದ ಕಾಲೇಜಿಗೆ ಸೋಮವಾರ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿದ್ದೇಕೆ ಎಂಬುದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್​, ಕುಂದಾಪುರದಲ್ಲಿ ಇಂದು(ಸೋಮವಾರ) ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆದರೆ, ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳೂ ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಅವರ ಮುಗ್ಧತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದರು.

ನ್ಯಾಯಾಲಯದ ಆದೇಶವನ್ನು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ. ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲಾ-ಕಾಲೇಜಿಗೆ ಬರಬೇಕು. ಶಾಲಾ ಆವರಣದ ಗೇಟ್​ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ಧ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೊಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತಹದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ಬಿ.ಸಿ. ನಾಗೇಶ್ ಹೇಳಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

17 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

18 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago