ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಮಾ.16 ಕೊನೆ ದಿನ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮಾ.16 ಕೊನೆ ದಿನವಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೀವು ಮತದಾನ ಮಾಡಬೇಕಾ? ಹಾಗಾದ್ರೇ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಅನ್ನೊಂದನ್ನು ತಪ್ಪದೇ ಖಾತ್ರಿ ಮಾಡಿಕೊಳ್ಳಿ.

ಒಂದು ವೇಳೆ ನಿಮ್ಮ ಹೆಸರು ಇಲ್ಲದೇ ಹೋದರೆ ಕೂಡಲೇ ಹತ್ತಿರದ ಚುನಾವಣಾ ಅಧಿಕಾರಿ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಭೇಟಿ ನೀಡಿ ತಪ್ಪದೇ ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿ ಹಾಗೂ ಅ ಬಗ್ಗೆ ಖಾತ್ರಿ ಮಾಡಿಕೊಂಡು ಈ ಬಾರಿಯ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಿ. ಅಂದ ಹಾಗೇ ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮಾ.16 ಕೊನೆ ದಿನವಾಗಿದೆ.