ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ : ಸುರತ್ಕಲ್‌ ಟೋಲ್‌  ರದ್ದು , ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನ – Vishwanews24

Featured, ದಕ್ಷಿಣ ಕನ್ನಡ

ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ : ಸುರತ್ಕಲ್‌ ಟೋಲ್‌ ಸಂಗ್ರಹ ರದ್ದು , ಹೆಜಮಾಡಿ ಟೋಲ್‌ನೊಂದಿಗೆ ವಿಲೀನ

ಮಂಗಳೂರು: ಸುರತ್ಕಲ್‌ ಎನ್‌ಐಟಿಕೆ ಬಳಿ ಇರುವ ಅಕ್ರಮ ಟೋಲ್‌ಗೇಟ್‌ ವಿರುದ್ಧ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ ಕೊನೆಗೂ ಟೋಲ್‌ಗೇಟ್‌ನ್ನು ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನಗೊಳಿಸಿ ಆದೇಶ ಹೊರಡಿಸಿದೆ.

ಸುರತ್ಕಲ್‌ ಟೋಲ್‌ ಸಂಗ್ರಹ ರದ್ದುಗೊಳಿಸಿರುವ ಕುರಿತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೋಮವಾರ ಟ್ವೀಟ್‌ ಮಾಡಿದ್ದಾರೆ. ಆದರೆ, ಈ ಟೋಲ್‌ ಸಂಗ್ರಹ ಸಂಪೂರ್ಣ ನಿಲ್ಲುವವರೆಗೂ ಹೋರಾಟ ಮುಂದುವರಿಸುವುದಾಗಿ ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ ಪ್ರತಿಕ್ರಿಯಿಸಿದೆ.

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ಆರ್. ಮುರಳಿಕೃಷ್ಣ ನಿಧನ – Vishwanews24

”ಸುರತ್ಕಲ್‌ ಸಮೀಪದ ಟೋಲ್‌ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್‌ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ” ಎಂದು ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌ ಮಾಡಿದ್ದಾರೆ.

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ವಿಧಿವಶ – Vishwanews24

ಸುರತ್ಕಲ್‌ನಲ್ಲಿಏಳು ವರ್ಷ ಹಿಂದೆ ಶುಲ್ಕ ವಸೂಲಿ ಕೇಂದ್ರ ಆರಂಭಿಸುವಾಗಲೇ ನಾಗರಿಕ ಸಂಘಟನೆಗಳ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಫಲವಾಗಿ ಒಂದೆರಡು ತಿಂಗಳ ಕಾಲ ಟೋಲ್‌ ಸಂಗ್ರಹ ಸ್ಥಗಿತಗೊಂಡಿದ್ದರೂ, ಬಳಿಕ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಮತ್ತೆ ಶುಲ್ಕ ಸಂಗ್ರಹ ಆರಂಭವಾಗಿತ್ತು. ಅದಾಗಿ ಒಂದು ವರ್ಷದಲ್ಲಿ 20 ಕಿಮೀ ಅಂತರದೊಳಗೆ ಹೆಜಮಾಡಿ ಟೋಲ್‌ಗೇಟ್‌ ಆರಂಭವಾದ ಬಳಿಕ ಸುರತ್ಕಲ್‌ ಟೋಲ್‌ ರದ್ದುಗೊಳಿಸುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು.

Leave a Reply