ಕುಂದಾಪುರ: ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದ್ದಾರೆ. ಬೈಂದೂರಿನಲ್ಲಿ ಮಂಗಳವಾರ ಯೆಡ್ತೆರೆಯಿಂದ ಬೈಂದೂರಿನರೆಗೆ ಹಮ್ಮಿಕೊಳ್ಳಲಾದ ಕಾಂಗ್ರೆಸ್ ಕಾರ್ಯಕರ್ತರ ಕಾಲ್ನಡಿಗೆಯ ಮೆರವಣಿಗೆ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.
ಯಾರು ಏನು ಬೇಕಾದರೂ ಹೇಳಲಿ. ಬಿಜೆಪಿಯಿಂದ ಜನಸಾಮಾನ್ಯರಿಗೆ ಆಗಿರುವ ಸಮಸ್ಯೆಗಳನ್ನು ಗ್ರಾಮೀಣ ಭಾಗದ ಮಹಿಳೆಯರೂ ಸೇರಿದಂತೆ ಎಲ್ಲಾ ವರ್ಗದ ಜನ ಅರಿತುಕೊಂಡಿದ್ದಾರೆ. ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಇಂದಿನ ಮೆರವಣಿಗೆಯಲ್ಲಿ ಕಾರ್ಯಕರ್ತರು ನನ್ನ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತದೆ ಎಂದ ಅವರು ನನ್ನ ಕ್ಷೇತ್ರ ಮೀನುಗಾರರ ಸಮಸ್ಯೆ ಪರಿಹರಿಸುತ್ತೇನೆ ಎಂದರು.
ಈಗಾಗಲೇ ಒಂದು ಸುತ್ತಿನ ಕ್ಷೇತ್ರ ಬೇಟಿ ಮುಗಿದಿದೆ. ಪಕ್ಷದ ಭರವಸೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಈ ಬಾರಿ 35 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲವು ಸಾಧಿಸುತ್ತೇನೆ ಎಂದರು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಮೊದಲಾದವರು ಇದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…