Featured

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ

ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ ಅಷ್ಟೇ ಅಲ್ಲದೆ ತಮ್ಮ ನಿರೂಪಣೆ ಮೂಲಕವೂ ಗಮನ ಸೆಳೆದಿದ್ದಾರೆ. ಆದರೆ ಇದೀಗ ಅವರು ತಮ್ಮ ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, “ಏನು ಗೊತ್ತಿಲ್ಲದ್ದಿದ್ದ ನನಗೆ ಕನ್ನಡ ಕಲಿಸಿ, ವೇದಿಕೆ ಮೇಲೆ ನಿಲ್ಲೋದನ್ನು ಕಲಿಸಿಕೊಟ್ಟು.. ನನ್ನನ್ನು ನಿರೂಪಕಿಯಾಗಿ ಮಾಡಿ ಇಲ್ಲಿಯವರೆಗೂ ಬರಲು ನನ್ನ ಹಿಂದೆ ನಿಂತವರು ಹಲವರು. ನನ್ನ ನಿರೂಪಣೆಯ ಜರ್ನಿಯಲ್ಲಿ ಅತ್ಯುತ್ತಮ ವ್ಯಕ್ತಿಗಳು ಪರಿಚಯವಾದ್ರು, ಅವರೆಲ್ಲರೊಂದಿಗಿನ ಸಂಬಂಧವನ್ನು ನಾನು ನನ್ನ ಜೀವನದುದ್ದಕ್ಕೂ ಇಟ್ಟುಕೊಳ್ತೀನಿ” ಎಂದು ತಿಳಿಸಿದ್ದಾರೆ.

“ನಾನು ನನ್ನೊಳಗಿನ ಕಲಾವಿದೆಗೆ ತೃಪ್ತಿಪಡಿಸಬೇಕು ಅನ್ನೋದೇ ಈ ನಿರ್ಧಾರಕ್ಕೆ ಕಾರಣ.. ನಿಮ್ಮಿಂದ ತುಂಬಾ ಕಲಿತಿದ್ದೀನಿ, ತುಂಬಾ ಪ್ರೀತಿ ಕೊಟ್ಟಿದೀರಿ. ಎಲ್ಲರಿಗೂ ಥ್ಯಾಂಕ್ಯೂ.. ಎಲ್ಲವೂ ಒಳ್ಳೆಯದಕ್ಕಾಗಿಯೇ ಆಗುತ್ತೆ. ಮುಂದೆ ಬೇರೆ ಬೇರೆ ದಾರಿಗಳಿವೆ. ಮುಂದೆ ಜೀವನ ಇನ್ನೂ ಚೆನ್ನಾಗಿದೆ. ಈ ವಿದಾಯಕ್ಕೆ ಇದು ಸರಿಯಾದ ಸಮಯ.. ನಿಮ್ಮ ಪ್ರೀತಿಗೆ ನಾನು ಚಿರಋಣಿ” ಎಂದು ಹೇಳಿದ್ದಾರೆ.

“ನಾನು ನಿಮ್ಮೆಲ್ಲರಲ್ಲೂ ಕ್ಷಮೆ ಕೇಳುತ್ತೇನೆ. ಹೊಸ ಶೋನಲ್ಲಿ ನಾನು ಇರಬೇಕಿತ್ತು. ಆದರೆ, ಇಲ್ಲ. ವಾಹಿನಿಯವರು ಏನೇನೋ ಪ್ರಾಮಿಸ್ ಮಾಡಿಕೊಂಡಿದ್ದಾರೆ. ಅದೇನು ಎಂಬುದು ನಾನು ಮಾಡಿಲ್ಲ. ಅಪೂರ್ಣವಾಗಿ ಈ ಪ್ರಯಾಣ ಕೊನೆ ಮಾಡುತ್ತಿದ್ದೇನೆ. ನೀವೆಲ್ಲ ಸಾಕಮ್ಮ ಎನ್ನುವುದರೊಳಗೆ ನಾನೇ ಆ್ಯಂಕರಿಂಗ್ ಮುಗಿಸಿದ್ದೇನೆ. ಸೀರಿಯಲ್‌ಗೆ ಮತ್ತೆ ಬರುತ್ತೇನೋ ಇಲ್ಲವೋ ಎಂಬುದು ಗೊತ್ತಿಲ್ಲ” ಎಂದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

34 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago