Featured

ನಿರೂಪಣೆ ನೀವಿಲ್ಲದೆ ಅಪೂರ್ಣ : ಅನುಶ್ರೀ ಭಾವುಕ – vishwanews24

ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು  : ಅನುಶ್ರೀ ಭಾವುಕ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ  ಜು.11ರಂದು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ  ಅವರು ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. ನಿರೂಪಣೆ ನೀವಿಲ್ಲದೇ ಅಪೂರ್ಣ ಎಂದು ಕಂಬನಿ ಮಿಡಿದಿದ್ದಾರೆ.

ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದಿದ್ದಾರೆ ಅನುಶ್ರೀ. ಈ ವಿಚಾರ ನೋವು ತಂದಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ. ಇಂದಿಗೂ ಹಸಿರಾಗಿದೆ. ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು ಓಂ ಶಾಂತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನುಶ್ರೀ ಬರೆದುಕೊಂಡಿದ್ದಾರೆ.

 

 

 

ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

Vishwa News 24

Recent Posts

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

5 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

14 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago