Featured

ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ – vishwanews24

ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು  ಇದೀಗ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು  ಜೊತೆ ನಟಿ ಸಮಂತಾ ರುತ್ ಪ್ರಭು ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ ಆವರಣದಲ್ಲಿರುವ ಲಿಂಗಭೈರವಿ ದೇವಿಯ ದೇವಸ್ಥಾನದಲ್ಲಿ ಇಂದು ಸರಳ ವಿವಾಹವಾಗಿದ್ದಾರೆ. ಸಮಂತಾ ಕೆಂಪು ಸೀರೆ ಧರಿಸಿ ಮಿಂಚಿದ್ರೆ, ರಾಜ್ ನಿಡಿಮೋರು ವೈಟ್ & ವೈಟ್ ಕುರ್ತಾ ಧರಿಸಿ ಸರಳವಾಗಿ ಕಾಣಿಸಿಕೊಂಡಿದ್ದಾರೆ.

ʻಫ್ಯಾಮಿಲಿ ಮ್ಯಾನ್ʼ, ʻಸಿಟಾಡೆಲ್ ಹನಿಬನಿʼ ನಿರ್ದೇಶಕನ ಜೊತೆ ಸಮಂತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವು ತಿಂಗಳಿಂದ ಬಹಿರಂಗವಾಗೇ ಈ ಜೋಡಿ ಕಾಣಿಸ್ಕೊಳ್ತಾ ಬಂದಿತ್ತು. ಇದೀಗ ಗುಟ್ಟಾಗಿ ಕಲ್ಯಾಣವಾಗಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮದುವೆಯ ಫೋಟೋಗಳನ್ನ ಸಮಂತಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಸಮಂತಾ ಖ್ಯಾತ ನಟ ನಾಗಚೈತನ್ಯ ಜೊತೆಗಿನ ಮದುವೆಯಿಂದ ವಿಚ್ಛೇದನ ಪಡೆದುಕೊಂಡಿದ್ದರು. ಇದೀಗ ವೆಬ್‌ಸಿರೀಸ್‌ಗಳ ಮೂಲಕ ಪರಿಚಯವಾದ ಬಹುಕಾಲದ ಒಡನಾಡಿ ರಾಜ್ ಜೊತೆ ಸ್ಯಾಮ್ ಪ್ರೀತಿಯಲ್ಲಿ ಬಿದ್ದಿದ್ದು ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ಲಿಂಗಭೈರವಿ ದೇವಿಯ ಆರಾಧಕಿ ಆಗಿರುವ ಸಮಂತಾ ಮನೆಯಲ್ಲಿ ನಿತ್ಯವೂ ಪೂಜೆ ಮಾಡೋದಾಗಿ ಹೇಳಿಕೊಂಡಿದ್ರು. ದೇವಿ ಮುಂದೆ ಧ್ಯಾನ ಮಾಡುವ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಅದೇ ದೇವಿಯ ಮುಂದೆ ರಾಜ್ ಸಮಂತಾ ಅಧಿಕೃತ ದಾಂಪತ್ಯಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರಳ ವಿವಾಹ ಸುಂದರ ಫೋಟೋಗಳನ್ನ ಸಮಂತಾ ರಿಲೀಸ್ ಮಾಡಿದ್ದಾರೆ. ಲಿಂಗಭೈರವಿ ದೇವಿ ಮುಂದೆ ಇಂದು ಬೆಳ್ಳಂಬೆಳಗ್ಗೆ ಹಿಂದೂ ಸಂಪ್ರದಾಯದ ಪ್ರಕಾರ ಸಮಂತಾ ರಾಜ್ ಶಾಸ್ತೋಕ್ತ ಕಲ್ಯಾಣ ನಡೆದಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago