ನವದೆಹಲಿ:. ಡಿ.16 ರ ಸೋಮವಾರ ಮುಂಜಾನೆ 5 ಗಂಟೆಗೆ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲಾಗುವುದು ಎಂದು ತಿಹಾರ್ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು.
ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಹೀಗಾಗಿ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆಯಲ್ಲಿ ಆತ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರ್ಜಿಯನ್ನು ತಿರಸ್ಕರಿಸುವ ಮೂಲಕ ಶಿಕ್ಷೆ ಜಾರಿಗೆ ಹಸಿರು ನಿಶಾನೆ ತೋರಿಸಿದ್ದರು. ಆರು ಮಂದಿ ಅಪರಾಧಿಗಳಲ್ಲಿ ಓರ್ವ ಆತ್ಮಹತ್ಯೆಗೆ ಶರಣಾದರೆ ಇನ್ನುಳಿದ ಐವರಲ್ಲಿ ಓರ್ವ ಬಾಲಾಪರಾಧಿಯಾಗಿದ್ದ. ಆತ ಬಂಧನದಲ್ಲಿದ್ದಾನೆ.
ಸೋಮವಾರ ಕೇಂದ್ರ ಸರ್ಕಾರದಿಂದ ಆದೇಶ ಪ್ರತಿ ಜೈಲಿನ ಅಧಿಕಾರಿಗಳಿಗೆ ತಲುಪಿದ್ದು, ನಾಲ್ವರು ಅಪರಾಧಿಗಳಳು ವಿಕೃತ ಮೆರೆದ ದಿನವಾದ ಡಿ. 16 ರಂದೇ ಗಲ್ಲಿಗೇರಿಸುವಂತೆ ಆದೇಶ ನೀಡಿದ್ದು ವಿಶೇಷವಾಗಿದೆ. ಅಪರಾಧಿಗಳಿರುವ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…