ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿ ಅಕ್ಷಯ್ಕುಮಾರ್ಗೆ ಸುಪ್ರೀಂಕೋರ್ಟ್ ಗಲ್ಲುಶಿಕ್ಷೆ ಕಾಯಂಗೊಳಿಸಿ ತೀರ್ಪು ನೀಡಿದೆ.
ಪ್ರಕರಣದ ಆರೋಪಿ ಅಕ್ಷಯ್ ಕುಮಾರ್ ತನಗೆ ಕೋರ್ಟ್ ವಿಧಿಸಿರುವ ಗಲ್ಲುಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಸ್ತಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ನೀಡಿತು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ತ್ರಿಸದಸ್ಯರ ಪೀಠ ಅರ್ಜಿ ವಿಚಾರಣೆ ನಡೆಸಿತು. ಮೊದಲು ಅಪರಾಧಿ ಅಕ್ಷಯ್ ಕುಮಾರ್ ಪರ ವಾದ ಮಂಡನೆ ಮಾಡಿದ ವಕೀಲ ಎ.ಪಿ.ಸಿಂಗ್, ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳು ಹಾಗೂ ತನಿಖೆಯಲ್ಲಿ ದೋಷವಿದೆ. ಇಲ್ಲಿ ಮಾಧ್ಯಮಗಳು ಮತ್ತು ಸಾರ್ವಜನಿಕರ ಒತ್ತಡವೇ ಹೆಚ್ಚಾಗಿದೆ. ನನ್ನ ಕಕ್ಷಿದಾರರಾದ ಅಕ್ಷಯ್ ಕುಮಾರ್ ಸಿಂಗ್ ಅವರನ್ನು ವೃಥಾ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
2012ರ ಡಿಸೆಂಬರ್ 16ರಂದು 23 ವರ್ಷದ ಯುವತಿ ನಿರ್ಭಯಾಳ ಮೇಲೆ ಆರು ಮಂದಿ ಚಲಿಸುತ್ತಿರುವ ಬಸ್ಸಿನಲ್ಲಿ ಅತ್ಯಾಚಾರವೆಸಗಿ ನಂತರ ಭೀಕರವಾಗಿ ಹತ್ಯೆಗೈದ್ದರು. ಅಕ್ಷಯ್ ಪರ ವಕೀಲರು ಕೇವಲ 21 ನಿಮಿಷಗಳಲ್ಲಿ ಎಲ್ಲಾ 6 ಮಂದಿ ಬಸ್ಸಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಲು ಸಾಧ್ಯವಿಲ್ಲ ಎಂದು ಆರೋಪಿ ಪರ ವಾದ ಮಂಡಿಸುವಾಗ ಹೇಳಿ.ತಿಹಾರ್ ಜೈಲಿನ ನಿವೃತ್ತ ಅಧಿಕಾರಿಯ ಆದೇಶವನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.
ಅರ್ಜಿಯನ್ನು ನಿರಾಕರಿಸುವಂತೆ ಒತ್ತಾಯಿಸಿದ ನಿರ್ಭಯಾ ಪೋಷಕರ ಪರ ವಕೀಲರು, ನಿರ್ಭಯಾ ಕೊಲೆ ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಿ ನ್ಯಾಯ ಒದಗಿಸದಿದ್ದರೆ ದೇವರು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಯಾವುದೇ ಕಾರಣಕ್ಕೂ ಜೀವದಾನ ನೀಡಬಾರದು ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…