ನವದೆಹಲಿ: ನಿರ್ಭಯಾ ತಾಯಿ ಆಶಾದೇವಿಯವರ ನೋವು ನನಗೆ ಅರ್ಥವಾಗುತ್ತದೆ. ಅವರು ಸೋನಿಯಾಗಾಂಧಿಯವರನ್ನು ಉದಾಹರಣೆಯಾಗಿ ತೆಗೆದುಕೊಂಡು ಅವರಂತೆ ಅಪರಾಧಿಗಳನ್ನು ಕ್ಷಮಿಸಲು ನಾನು ಒತ್ತಾಯಿಸುತ್ತೇನೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿದ್ದಾರೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದು, ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸೋನಿಯಾ ಗಾಂಧಿಯವರು ತನ್ನ ಪತಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ ನಳಿನಿ ಅವರಿಗೆ ಸೋನಿಯಾ ಗಾಂಧಿಯವರು ಕ್ಷಮೆ ನೀಡಿದ್ದಾರೆ. ನಾವು ನಿರ್ಭಯಾ ತಾಯಿ ಆಶಾದೇವಿಯವರ ಪರವಾಗಿ ಇದ್ದೇವೆ. ಆದರೆ ಈ ಗಲ್ಲು ಶಿಕ್ಷೆಯ ಪರವಾಗಿ ಇಲ್ಲ ಎಂದು ಹೇಳಿದ್ದಾರೆ. ಈ ಟ್ವೀಟ್ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
1991ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ನಳಿನಿ ಬಂಧನಕ್ಕೊಳಗಾಗಿ ಅಪರಾಧಿ ಎಂದು ಸಾಬೀತಾಗಿ ಸದ್ಯ ಜೈಲು ಶಿಕ್ಷೆ ಅನುಭವಿಸುತ್ತಿದ್ದಾಳೆ.
ವಿನಯ್, ಅಕ್ಷಯ್, ಪವನ್ ಮತ್ತು ಮುಕೇಶ್ ಸಿಂಗ್ ಎಂಬುವವರನ್ನು ನಿರ್ಭಯಾ ಅತ್ಯಾಚಾರ ಮತ್ತು ನಂತರ ಸಾವಿನ ಕೇಸಿನಲ್ಲಿ ಅಪರಾಧಿಗಳೆಂದು ದೆಹಲಿ ನ್ಯಾಯಾಲಯ ಘೋಷಿಸಿ ಜನವರಿ 22ರಂದು ಅವರನ್ನು ನೇಣಿಗೇರಿಸುವುದು ಎಂದು ಆದೇಶ ಹೊರಡಿಸಿತ್ತು. ಆದರೆ ಅದರಲ್ಲಿ ಮುಕೇಶ್ ಸಿಂಗ್ ಮತ್ತು ವಿನಯ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರು. ಅವರ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಇದೀಗ ಫೆಬ್ರವರಿ 1ರಂದು ನೇಣಿಗೇರಿಸುವಂತೆ ಹೊಸ ಆದೇಶ ಹೊರಡಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…