ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಯೋರ್ವ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದ್ದು, ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ ಮಾಡಿದೆ. ಜನವರಿ 22ರ ಬುಧವಾರ ಬೆಳಗ್ಗೆ 7 ಗಂಟೆಗೆ ನಾಲ್ವರಿಗೂ ಮರಣದಂಡನೆ ಶಿಕ್ಷೆ ವಿಧಿಸಲು ಕೋರ್ಟ್ ಡೆತ್ ವಾರಂಟ್ ಜಾರಿಗೊಳಿಸಿದೆ.
ಕಾನೂನಿನ ಪ್ರಕಾರ, ಅಪರಾಧಿಗಳಿಗೆ ದೊರೆಯಬೇಕಾದ ಎಲ್ಲಾ ಕಾನೂನು ಅವಕಾಶಗಳ ಬಾಗಿಲು ಸಂಪೂರ್ಣ ಮುಚ್ಚಿದ ನಂತರ ಕೊನೆಯ ಹಂತವಾದ ಮರಣದಂಡನೆ ಪ್ರಕ್ರಿಯೆಗಾಗಿ ಕೋರ್ಟ್ ಬ್ಲ್ಯಾಕ್ ವಾರಂಟ್ (ಡೆತ್ ವಾರಂಟ್) ಹೊರಡಿಸುತ್ತದೆ.
ಈಗಾಗಲೇ ನಿರ್ಭಯಾ ಪ್ರಕರಣದ ಆರೋಪಿಗಳನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಜೈಲು ಅಧಿಕಾರಿಗಳು ಮರಣದಂಡನೆಗೆ ಅಂತಿಮ ಸಿದ್ದತೆ ಮಾಡಿಕೊಳ್ಳುತ್ತಿದ್ದು ನ್ಯಾಯಾಲಯದ ಆದೇಶಕ್ಕೆ ಕಾಯುತ್ತಿದ್ದರು. ಇನ್ನು ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಹೊಸ ವಧಾಸ್ಥಳವನ್ನು ನಿರ್ಮಿಸಲಾಗುತಿದ್ದು, ಜೈಲು ಸಂಖ್ಯೆ ಮೂರರಲ್ಲಿ ಈ ಈ ಮೊದಲು ವಧಾಸ್ಥಳ ಇತ್ತು, ಅದರ ಪಕ್ಕದಲ್ಲೇ ನೂತನ ವಧಾಸ್ಥಳವನ್ನು ನಿರ್ಮಿಸಲಾಗುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…