ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ  ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ – Vishwanews24

Featured, ರಾಜ್ಯ ನ್ಯೂಸ್

ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ  ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ

ಬೆಂಗಳೂರು (Vishwanews24): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ.

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.

ಅಪ್ರಾಪ್ತ ಬಾಲಕಿಯ ಜತೆ ಸುತ್ತಾಟ – ಯುವಕನ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ ;  7 ಜನ ಕಾರ್ಯಕರ್ತರ  ಬಂಧನ – Vishwanews24

ಡಿಜಿಪಿ ಆಗಿದ್ದರೂ ಕೆಲವೊಂದು ಬೆಳವಣಿಗಳಿಂದ ಬೇಸಗೊಂಡಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply