ನವದೆಹಲಿ: ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ಗಾಗಿ ನಡೆಸಲಾಗುತ್ತಿರುವ ಡೋಪಿಂಗ್ ಪರೀಕ್ಷೆಯಲ್ಲಿ ಅಗ್ರ ಓಟಗಾರ್ತಿ ಎಸ್.ಧನಲಕ್ಷ್ಮಿ, ರಾಷ್ಟ್ರೀಯ ದಾಖಲೆ ರಚಿಸಿದ ಟ್ರಿಪಲ್ ಜಂಪರ್ ಐಶ್ವರ್ಯಾ ಬಾಬು ವಿಫಲರಾಗಿದ್ದು ಕಾಮನ್ವೆಲ್ತ್ ಗೇಮ್ಸ್‌ನಿಂದ ಹೊರಬಿದ್ದಿದ್ದಾರೆ.
ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ ಗಾಗಿ 36 ಸದಸ್ಯರ ಭಾರತೀಯ ಅಥ್ಲೆಟಿಕ್ಸ್ ತಂಡದಲ್ಲಿ ಸ್ಥಾನ ಪಡೆದಿರುವ 24 ವರ್ಷದ ಧನಲಕ್ಷ್ಮಿ, ವಿಶ್ವ ಅಥ್ಲೆಟಿಕ್ಸ್‌ನ ಅಥ್ಲೆಟಿಕ್ಸ್ ಇಂಟೆಗ್ರಿಟಿ ಯುನಿಟ್ (AIU) ವಿದೇಶದಲ್ಲಿ ನಡೆಸಿದ ಡೋಪ್ ಪರೀಕ್ಷೆಯಲ್ಲಿ ನಿಷೇಧಿತ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.
ಕಳೆದ ತಿಂಗಳು ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಅಂತರ್ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಾಡಾ ಅಧಿಕಾರಿಗಳು 24 ವರ್ಷದ ಟ್ರಿಪಲ್ ಜಂಪರ್ ಐಶ್ವರ್ಯಾ ಬಾಬು ಅವರ ಸ್ಯಾಂಪಲ್ ಪಡೆದುಕೊಂಡಿದ್ದು, ಇವರು ಕೂಡಾ ಡೋಪ್ ಟೆಸ್ಟ್ ನಲ್ಲಿ ವಿಫಲರಾಗಿದ್ದಾರೆ.
ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್‌ಗೂ ಧನಲಕ್ಷ್ಮಿ ಆಯ್ಕೆಯಾಗಿದ್ದರು. ಆದರೆ ವೀಸಾ ಸಮಸ್ಯೆಗಳಿಂದಾಗಿ ಟೂರ್ನಿಯಲ್ಲಿ ಪಾಲ್ಗೊಂಡಿರಲಿಲ್ಲ. ಇದೀಗ ಡೋಪಿಂಗ್ ನಲ್ಲಿ ವಿಫರಾಗಿರುವ ಅವರು , ಕಾಮನ್ವೆಲ್ತ್ನಿಂದಲೂ ಹೊರಬಿದ್ದಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…