Featured

ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ : ರಮೇಶ್​​ ಜಾರಕಿಹೊಳಿ -Vishwanews24

ಬೆಳಗಾವಿ:ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಶುಕ್ರವಾರ ಗೋಕಾಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವಾಗ ಭಾವುಕರಾದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್​ನಲ್ಲಿ ​ಬಾಗಿಲು ಕಾಯುವವರೇ ನಾಯಕ. ಬ್ಯಾಗ್​ ಹಿಡಿದು ಬಾಗಿಲು ಕಾಯುವವರಷ್ಟೇ ಲೀಡರ್. ಪಕ್ಷದಲ್ಲಿ ಮಾಸ್ ಲೀಡರ್​ಗಳಿಗೆ ಯಾವುದೇ ಬೆಲೆ ಇಲ್ಲ. ಸಿದ್ದರಾಮಯ್ಯ ಪಕ್ಷವನ್ನು ಕಪಿಮುಷ್ಠಿಯಲ್ಲಿಟ್ಟಿದ್ದಾರೆ. ಪಕ್ಷದಲ್ಲಿ ಏನೇ ಆದರೂ ಮಲ್ಲಿಕಾರ್ಜುನ ಖರ್ಗೆ ನೋಡಲ್ಲ. ಸಿದ್ದರಾಮಯ್ಯ ದರ್ಪದ ನಾಯಕ, ಡಿಕೆಶಿ ಪೋಸ್​ ಕೊಡೋ ಲೀಡರ್. ಮಲ್ಲಿಕಾರ್ಜುನ ಖರ್ಗೆ ಬ್ಲ್ಯಾಕ್​ಮೇಲ್​ ಮಾಡಲ್ಲ, ಧೈರ್ಯನೂ ಮಾಡಲ್ಲ.ಆದರೆ, ಸಿದ್ದರಾಮಯ್ಯ ಅವೆರಡನ್ನೂ ಮಾಡಿ ಮುಖ್ಯಮಂತ್ರಿ ಆದರು. ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಬಿಜೆಪಿ ಸೇರುವ ಹಿಂದಿನ ದಿನ ರಾತ್ರಿ ನಿದ್ದೆ ಬಂದಿರಲಿಲ್ಲ. ನಾನು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅಭಿಮಾನಿ. ನನ್ನ ದುಃಖ ಬಹಿರಂಗವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ದುಃಖ ನುಂಗಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿಯಿದೆ. ಕಾಂಗ್ರೆಸ್​​ನಲ್ಲೇ ಉಳಿದಿದ್ದರೆ ನಿರ್ನಾಮ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಪಕ್ಷದ ಜತೆಗಿನ ನಂಟು ನೆನೆದು ರಮೇಶ್ ಜಾರಕಿಹೊಳಿ ಭಾವುಕರಾಗಿದ್ದಾರೆ.

ನಾನು ಮುಖ್ಯಮಂತ್ರಿ ಆಗೋ ಆಸೆ ಹೊಂದಿಲ್ಲ. ನನ್ನ ಲೆವಲ್​​​​​​ಗಿಂತ ನೂರು ಪಟ್ಟು ಬೆಳೆದಿದ್ದೇನೆ. ನನಗೆ ಯಾವುದೇ ಆಕಾಂಕ್ಷೆಯೂ ಇಲ್ಲ ಎಂದು ರಮೇಶ್​​​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

9 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

13 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

13 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

14 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago