ಬೆಳಗಾವಿ:ನಿಷ್ಠಾವಂತರಿಗೆ ಕಾಂಗ್ರೆಸ್ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಶುಕ್ರವಾರ ಗೋಕಾಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವಾಗ ಭಾವುಕರಾದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ನಲ್ಲಿ ಬಾಗಿಲು ಕಾಯುವವರೇ ನಾಯಕ. ಬ್ಯಾಗ್ ಹಿಡಿದು ಬಾಗಿಲು ಕಾಯುವವರಷ್ಟೇ ಲೀಡರ್. ಪಕ್ಷದಲ್ಲಿ ಮಾಸ್ ಲೀಡರ್ಗಳಿಗೆ ಯಾವುದೇ ಬೆಲೆ ಇಲ್ಲ. ಸಿದ್ದರಾಮಯ್ಯ ಪಕ್ಷವನ್ನು ಕಪಿಮುಷ್ಠಿಯಲ್ಲಿಟ್ಟಿದ್ದಾರೆ. ಪಕ್ಷದಲ್ಲಿ ಏನೇ ಆದರೂ ಮಲ್ಲಿಕಾರ್ಜುನ ಖರ್ಗೆ ನೋಡಲ್ಲ. ಸಿದ್ದರಾಮಯ್ಯ ದರ್ಪದ ನಾಯಕ, ಡಿಕೆಶಿ ಪೋಸ್ ಕೊಡೋ ಲೀಡರ್. ಮಲ್ಲಿಕಾರ್ಜುನ ಖರ್ಗೆ ಬ್ಲ್ಯಾಕ್ಮೇಲ್ ಮಾಡಲ್ಲ, ಧೈರ್ಯನೂ ಮಾಡಲ್ಲ.ಆದರೆ, ಸಿದ್ದರಾಮಯ್ಯ ಅವೆರಡನ್ನೂ ಮಾಡಿ ಮುಖ್ಯಮಂತ್ರಿ ಆದರು. ನಿಷ್ಠಾವಂತರಿಗೆ ಕಾಂಗ್ರೆಸ್ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬಿಜೆಪಿ ಸೇರುವ ಹಿಂದಿನ ದಿನ ರಾತ್ರಿ ನಿದ್ದೆ ಬಂದಿರಲಿಲ್ಲ. ನಾನು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅಭಿಮಾನಿ. ನನ್ನ ದುಃಖ ಬಹಿರಂಗವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ದುಃಖ ನುಂಗಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿಯಿದೆ. ಕಾಂಗ್ರೆಸ್ನಲ್ಲೇ ಉಳಿದಿದ್ದರೆ ನಿರ್ನಾಮ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಪಕ್ಷದ ಜತೆಗಿನ ನಂಟು ನೆನೆದು ರಮೇಶ್ ಜಾರಕಿಹೊಳಿ ಭಾವುಕರಾಗಿದ್ದಾರೆ.
ನಾನು ಮುಖ್ಯಮಂತ್ರಿ ಆಗೋ ಆಸೆ ಹೊಂದಿಲ್ಲ. ನನ್ನ ಲೆವಲ್ಗಿಂತ ನೂರು ಪಟ್ಟು ಬೆಳೆದಿದ್ದೇನೆ. ನನಗೆ ಯಾವುದೇ ಆಕಾಂಕ್ಷೆಯೂ ಇಲ್ಲ ಎಂದು ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…