ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಅಥವಾ ಯಾವುದೇ ಅನಪೇಕ್ಷಿತ ಘಟನೆಗಳಿಗೆ ಸಂಬಂಧಿಸಿ ಸಾರ್ವಜನಿಕರ ದೂರಿಗೆ ಕಾಯದೆ, ಚುನಾವಣಾ ಸಿಬ್ಬಂದಿ ತಮ್ಮ ಗಮನಕ್ಕೆ ಬಂದ ತಕ್ಷ ಣ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗದ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ವೆಚ್ಚ ವೀಕ್ಷ ಕ ಮಲ್ಲಿಕಾರ್ಜುನ ಉತ್ತರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವು ಎರಡು ಜಿಲ್ಲೆಗಳಲ್ಲಿ ಹರಡಿಕೊಂಡಿರುವುದರಿಂದ ಎರಡೂ ಜಿಲ್ಲೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಹಣ ಸಾಗಾಟ ಸೇರಿದಂತೆ ಅಕ್ರಮ ಚಟುವಟಿಕೆಗಳ ಮಾಹಿತಿಯನ್ನು ಪರಸ್ಪರರು ಹಂಚಿಕೊಂಡು ಅವುಗಳನ್ನು ತಡೆಗಟ್ಟಬೇಕು. ದಿನದ 24 ಗಂಟೆಗಳ ಕಾಲವೂ ಈ ವಿಷಯದಲ್ಲಿ ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ನಿಗಾ ಇಡುವಂತೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಮಾಹಿತಿ ನೀಡಿ, ಕ್ಷೇತ್ರದ ಎಲ್ಲ 1,837 ಮತಗಟ್ಟೆಗಳಲ್ಲಿಯೂ ಮೂಲಸೌಕರ್ಯ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಚುನಾವಣಾ ತಹಸೀಲ್ದಾರ್ ಮುಹಮ್ಮದ್ ಇಸಾಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇರುವ ಮಾಧ್ಯಮ ಮೇಲ್ವಿಚಾರಣೆ ಸಮಿತಿ(ಎಂಸಿಎಂಸಿ) ಕೇಂದ್ರ, ಸಿವಿಜಿಲ್ ದೂರು ಕೋಶ, ಕಂಟ್ರೋಲ್ ರೂಂ ಮೊದಲಾದವುಗಳ ಕಾರ್ಯನಿರ್ವಹಣೆ ಪರಿಶೀಲಿಸಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…