ಹಾಸನ: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಚುನಾವಣಾ ಅಧಿಕಾರಿಗಳು ಕ್ರಮಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.
ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ ಆಯೋಜನೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.
‘ರಾಜ್ಯ ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್‌ಸ್ಪೆಕ್ಟರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಂಜೇಗೌಡ, ತಮ್ಮ ಹುದ್ದೆಗೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್‌ನೊಂದಿಗೆ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.
ಇದೇ ವೇಳೆ ಬಾಗೂರು ಮಂಜೇಗೌಡ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸುವಂತೆ ರೇವಣ್ಣ ಒತ್ತಾಯಿಸಿದರು.
‘ನಮ್ಮ ಪಕ್ಷದ ಸಮಾವೇಶಕ್ಕೆ ಸಾರಿಗೆ ಬಸ್‌ಗಳನ್ನು ನೀಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶಕ್ಕೆ ಸಾವಿರಾರು ಬಸ್‌ಗಳನ್ನು ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.
‘ಕಾಂಗ್ರೆಸ್‌ನವರಿಗೆ ಕುಮಾರಸ್ವಾಮಿಯನ್ನು ನೆನೆಯದೆ ಹೋದರೆ ನಿದ್ದೆ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.
ಕೆಲವೆಡೆ ಪೊಲೀಸ್ ವಾಹನಗಳಲ್ಲಿ ಹಣ ಸಾಗಣೆ ಮಾಡುವ ಹುನ್ನಾರ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…