ರಾಜ್ಯ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ: ಎಚ್.ಡಿ.ರೇವಣ್ಣ ಆರೋಪ

ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ‌ ಆಯೋಜನೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ‌ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ?– ಎಚ್.ಡಿ.ರೇವಣ್ಣ

ಹಾಸನ: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಚುನಾವಣಾ ಅಧಿಕಾರಿಗಳು ಕ್ರಮಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.

ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ‌ ಆಯೋಜನೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ‌ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.

‘ರಾಜ್ಯ ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್‌ಸ್ಪೆಕ್ಟರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಂಜೇಗೌಡ, ತಮ್ಮ ಹುದ್ದೆಗೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್‌ನೊಂದಿಗೆ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.

ಇದೇ ವೇಳೆ ಬಾಗೂರು ಮಂಜೇಗೌಡ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸುವಂತೆ ರೇವಣ್ಣ ಒತ್ತಾಯಿಸಿದರು.

‘ನಮ್ಮ‌ ಪಕ್ಷದ‌ ಸಮಾವೇಶಕ್ಕೆ ಸಾರಿಗೆ ಬಸ್‌ಗಳನ್ನು ನೀಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶಕ್ಕೆ ಸಾವಿರಾರು ಬಸ್‌ಗಳನ್ನು ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.

‘ಕಾಂಗ್ರೆಸ್‌ನವರಿಗೆ ಕುಮಾರಸ್ವಾಮಿಯನ್ನು ನೆನೆಯದೆ ಹೋದರೆ ನಿದ್ದೆ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.

ಕೆಲವೆಡೆ ಪೊಲೀಸ್‌ ವಾಹನಗಳಲ್ಲಿ ಹಣ ಸಾಗಣೆ ಮಾಡುವ ಹುನ್ನಾರ‌ ನಡೆದಿದ್ದು, ಈ ಬಗ್ಗೆ‌ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

19 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago