ಉಡುಪಿ

ನೀರುಪಾಲಾದ ಬಾಲೆ ಶವವಾಗಿ ಪತ್ತೆ – ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಉಡುಪಿ: ಮಂಗಳವಾರ ಸಂಜೆ ಮಳೆಯ ಹೊಡೆತಕ್ಕೆ ನೀರುಪಾಲಾದ ಬಾಲಕಿಯ ಮೃತದೇಹ ಇಂದು ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.

ನಿಧಿ ಆಚಾರ್ಯ(9) ನೀರುಪಾಲಾಗಿದ್ದ ಬಾಲಕಿಯಾಗಿದ್ದು, ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. 4ನೇ ವಿದ್ಯಾರ್ಥಿನಿ ನಿಧಿ ಆಚಾರ್ಯ ನೀರುಪಾಲಾಗಿದ್ದಳು. ಕಳೆದ ರಾತ್ರಿ ಅಗ್ನಿಶಾಮಕ, ಪೊಲೀಸರು, ಸ್ಥಳೀಯರು ಕಾರ್ಯಾಚರಣೆ ಮಾಡಿದ್ದರು. ಆದರೆ ಬಾಲಕಿ ನಿಧಿ ಪತ್ತೆಯಾಗಿರಲಿಲ್ಲ.

ಇದೀಗ ಇಂದು ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. ಎನ್‍ಡಿಆರ್ ಎಫ್ ಅಧಿಕಾರಿಗಳು ಬಂದು ಶೋಧ ಕಾರ್ಯ ಆರಂಭದಲ್ಲೇ ಮೃತದೇಹ ಸಿಕ್ಕಿದೆ. ಎನ್‍ಡಿಆರ್ ಎಫ್ ಜೊತೆ ಸ್ಥಳೀಯ ಮನೋಹರ್ ಎಂಬವರೂ ಬೋಟ್ ನಲ್ಲಿ ತೆರಳಿದ್ದರು.ನಿಧಿ ಮೃತದೇಹವನ್ನು ಮನೋಹರ್ ಮೊದಲು ಪತ್ತೆ ಮಾಡಿದರು. ಘಟನೆ ನಡೆದು ಸುಮಾರು 16 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದೆ. ಸ್ಕೂಲ್ ಬ್ಯಾಗ್, ಜಾಕೆಟ್ ಕೂಡಾ ಸ್ಥಳದಲ್ಲೇ ಸಿಕ್ಕಿದೆ. ಕಳೆದ ರಾತ್ರಿ ಸೈಕಲ್ ಪತ್ತೆಯಾಗಿತ್ತು. ಈ ಸಂಬಂಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿ ಮೃತದೇಹವನ್ನು ಪಡುಬಿದ್ರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗಳವಾರ ಸಂಜೆ ನಿಧಿ ಕೃತಕ ನೆರೆಗೆ ನೀರು ಪಾಲಾಗಿದ್ದು, ಶಾಲೆ ಬಿಟ್ಟು ಮನೆಗೆ ತೆರಳುವ ವೇಳೆ ಈ ಘಟನೆ ಸಂಭವಿಸಿತ್ತು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago