ನೀವು ಅರಮನೆಗೆ ಬರಬೇಕಿಲ್ಲ , ನಾನೂ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ : ಯದುವೀರ್ – Vishwanews24

Featured, ರಾಜ್ಯ ನ್ಯೂಸ್

ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ , ಸಾಮಾನ್ಯನಂತೆ ಕೆಲಸ ಮಾಡ್ತೀನಿ: ಯದುವೀರ್

ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಚುನಾವಣಾ ಪ್ರಚಾರ  ಸಂಬಂಧ ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ.

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ : ಈಶ್ವರಪ್ಪ – Vishwanews24

ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿದ್ದಾರೆ.

ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ , ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ : ಡಿ.ವಿ. ಸದಾನಂದಗೌಡ – Vishwanews24

Leave a Reply