ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಚುನಾವಣಾ ಪ್ರಚಾರ ಸಂಬಂಧ ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ.
ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…