ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ದೂರವಾಣಿ ಮೂಲಕ ಅಭಿನಂದನೆ ತಿಳಿಸಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ ಅವರು, “ನೀವು ಇತಿಹಾಸ ನಿರ್ಮಿಸಿದ್ದೀರಿ” ಎಂದು ಶ್ಲಾಘಿಸಿದರು. ಜೊತೆಗೆ “ಬೆಂಗಳೂರಿಗೆ ಯಾವಾಗ ಬರುತ್ತೀರಿ?” ಎಂದು ಆತ್ಮೀಯವಾಗಿ ಪ್ರಶ್ನಿಸಿ, ಆಹ್ವಾನವನ್ನೂ ನೀಡಿದ್ದಾರೆ.
ಇದನ್ನೂ ಓದಿ :
ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್, ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜಕೀಯ ನಾಯಕರು ಹಾಗೂ ಅಭಿಮಾನಿಗಳಿಂದ ವಿಜಯ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಇದಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲೂ ಶುಭಕೋರಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಆಳವಾದ ನಾಗರಿಕ ಸಂಬಂಧಗಳು ಹಾಗೂ ಸಾಂಸ್ಕೃತಿಕ ಸಾಮ್ಯತೆಯನ್ನು ಹಂಚಿಕೊಂಡಿವೆ. ಎರಡು ರಾಜ್ಯಗಳು ಸಾಮಾಜಿಕ ನ್ಯಾಯ, ಒಳಗೊಳ್ಳುವ ಬೆಳವಣಿಗೆ ಮತ್ತು ಒಕ್ಕೂಟ ಸಹಕಾರಕ್ಕಾಗಿ ಸಮಾನ ಆಕಾಂಕ್ಷೆಗಳನ್ನು ಹೊಂದಿವೆ. ಉಭಯ ರಾಜ್ಯಗಳ ನಡುವಿನ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಪಾರಂಪರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ವಿಜಯ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…