Featured

ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ : ಬಿಜೆಪಿಯನ್ನು ಟೀಕಿಸಿದ ಓವೈಸಿ -Vishwanews24

ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ : ಬಿಜೆಪಿಯನ್ನು ಟೀಕಿಸಿದ ಓವೈಸಿ -Vishwanews24

ಹೈದರಾಬಾದ್, : ”ಬಿಜೆಪಿ ಮಸೀದಿಗಳನ್ನು ನಾಶಪಡಿಸುತ್ತದೆ, ಆದರೆ ನಾವು ಮಂದಿರಕ್ಕಾಗಿ 10 ಕೋಟಿ ಸಂಗ್ರಹಿಸುತ್ತಿದ್ದೇವೆ” ಎಂದು ಎಐಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ.

ಮುಂಬರುವ ಜಿಎಚ್‌ಎಂಸಿ ಚುನಾವಣೆಗೆ ಎಐಐಐಎಂ ಪರ ಪ್ರಚಾರ ನಡೆಸಿ ಅಜಂಪುರಾದ ಫರ್ಹತ್ ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ, ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದು ”ಬಿಜೆಪಿ ಪಕ್ಷವು ದೇಶದಲ್ಲಿ ದ್ವೇಷವನ್ನು ಉತ್ತೇಜಿಸುತ್ತದೆ. ಆದರೆ ನಾವು ಎಲ್ಲರನ್ನು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದರು.

“ಇದು ನಿಮ್ಮ ಮತ್ತು ನಮ್ಮ ನಡುವಿನ ವ್ಯತ್ಯಾಸ. ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಬಿಜೆಪಿಯನ್ನು ಟೀಕಿಸಿದರು.

ರಾಮ ಜನ್ಮಭೂಮಿ ಚಳುವಳಿ ಹಾಗೂ ಬಾಬ್ರಿ ಮಸೀದಿ ಧ್ವಂಸದ ವಿಚಾರವಾಗಿ ಸೂಕ್ಷ್ಮ ಉಲ್ಲೇಖ ಮಾಡಿದ ಅವರು, ”ತೆಲಂಗಾಣ ವಿಧಾನಸಭೆಯಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ದೇವಸ್ಥಾನವೊಂದಕ್ಕೆ 10 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದಾರೆ. ಆ ಸಂದರ್ಭ ಮುಖ್ಯಮಂತ್ರಿ ಆಘಾತಕ್ಕೊಳಗಾಗಿದ್ದಾರೆ. ಎಲ್ಲಾ ಧರ್ಮದ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರು ತಮ್ಮ ಧರ್ಮವನ್ನು ಅನುಸರಿಸಬೇಕೆಂದು ನಾವು ಬಯಸುತ್ತೇವೆ. 1980 ಮತ್ತು 1990 ರ ಪರಿಸ್ಥಿತಿಯನ್ನು ಇಲ್ಲಿ ಪುನರಾವರ್ತಿಸಲು ನಾನು ಆಸ್ಪದ ನೀಡಲಾರೆವು” ಎಂದು ಹೇಳಿದರು.

“ನಾನು ಮಕ್ಕಳ ಮನಸ್ಸನ್ನು ಹಾಳುಮಾಡಲು ಬಯಸುವುದಿಲ್ಲ ಆದರೆ ಬಿಜೆಪಿ ದ್ವೇಷವನ್ನು ಉತ್ತೇಜಿಸಲು ಬಯಸಿದೆ” ಎಂದು ಓವೈಸಿ ಬಿಜೆಪಿಯನ್ನು ದೂರಿದರು.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

20 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

20 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

20 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

21 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

22 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

22 hours ago