Featured

ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆಂಬ ಭರವಸೆ ನನಗಿದೆ: ಠಾಕ್ರೆ ಪರ ಪ್ರಕಾಶ್‌ ರಾಜ್‌  – Vishwanews24

ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆಂಬ ಭರವಸೆ ನನಗಿದೆ: ಠಾಕ್ರೆ ಪರ ಪ್ರಕಾಶ್‌ ರಾಜ್‌

ಬೆಂಗಳೂರು: ಮಹಾರಾಷ್ಟ್ರ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿದ್ದನ್ನು ನಟ ಪ್ರಕಾಶ್‌ ರಾಜ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಕಾಶ್‌ ರಾಜ್‌, ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಉದ್ಧವ್‌ ಠಾಕ್ರೆ ಸರ್.‌ ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರದ ಜನರು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಭರವಸೆ ನನಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಚಾಣಕ್ಯರು (ಅಮಿತ್‌ ಶಾ) ಇಂದು ಲಡ್ಡುಗಳನ್ನು ತಿನ್ನಬಹುದು. ಆದರೆ ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ. ನಿಮಗೆ ಹೆಚ್ಚು ಶಕ್ತಿಯನ್ನೂ ನೀಡಲಿದೆ ಎಂದು ಠಾಕ್ರೆ ನಿಲುವನ್ನು ಸ್ವಾಗತಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗಿನ ಮೈತ್ರಿ ವಿರುದ್ಧ ಏಕನಾಥ್‌ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಶಾಸಕರು ಬಂಡಾಯ ಎದ್ದಿದ್ದಾರೆ. ಶಿಂಧೆ ಬಣದಲ್ಲಿ ಶಿವಸೇನಾ ಬಂಡಾಯ ಶಾಸಕರು 40 ಮಂದಿ ಇದ್ದಾರೆ ಎನ್ನಲಾಗಿದೆ. ಪಕ್ಷೇತರರು ಸೇರಿ 50 ಬಂಡಾಯ ಶಾಸಕರಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್‌ ಠಾಕ್ರೆಗೆ ರಾಜ್ಯಪಾಲರು ನಿನ್ನೆ ಸೂಚನೆ ನೀಡಿದ್ದರು. ರಾಜ್ಯಪಾಲರ ಸೂಚನೆ ವಿರುದ್ಧ ಠಾಕ್ರೆ ಸುಪ್ರೀಂ ಮೊರೆ ಹೋಗಿದ್ದರು. ಆದರೆ ಬಹುಮತ ಸಾಬೀತು ಸೂಚನೆಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯಿತು. ಬೇರೆ ದಾರಿಯಿಲ್ಲದೇ ಠಾಕ್ರೆ ಅವರು ನಿನ್ನೆ ರಾತ್ರಿ ರಾಜೀನಾಮೆ ನೀಡಿದ್ದಾರೆ.‌

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

20 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago