Featured

ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ – vishwanews24

ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ

ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್‌ ೧೮ ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್‌ ಐಡಿಗಳಿಗೆ ಅಪರಿಚಿತರು , ಏರ್‌ಪೋರ್ಟ್‌‌ನಲ್ಲಿ ಬಾಂಬ್‌ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ.

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್‌ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಜೂನ್‌ 18 ರಂದು ಸಂಜೆ ಬಜ್ಪೆ ರಾಣೆಗೆ ದೂರು ನೀಡಿದ್ದಾರೆ.

ಅಪರಿಚಿತನೊರ್ವ ವಿಮಾನ ನಿಲ್ದಾಣದ ಎರಡು ಇಮೇಲ್‌ ಐಡಿಗಳಿಗೆ exhumedyou888@gmail.com ಇಮೇಲ್‌ ವಿಳಾಸದಿಂದ ಬೆದರಿಕೆ ಸಂದೇಶ ಕಳಿಸಿದ್ದಾನೆ.ವಿಮಾನ ನಿಲ್ದಾಣದ ಒಳಗಡೆ ಸ್ಪೋಟಕ ಸಾಮಗ್ರಿ ಅಡಗಿಸಿಟ್ಟಿದ್ದು, ಕೆಲವೇ ಕ್ಷಣದಲ್ಲಿ ಸ್ಪೋಟ ಅಗಲಿದೆ. ನೀವೆಲ್ಲ ಸಾಯಲಿದ್ದೀರಿ.

ಗ್ರೂಪ್‌ ಕೆಎನ್‌ಆರ್‌ ಇದರ ಹಿಂದಿದೆ. ಮೇ. 1ರ ಡೆಲ್ಲಿ ಸ್ಕೂಲ್‌ ಟ್ಯಾಕ್‌ ಕೃತ್ಯದಲ್ಲೂ ಇದೇ ಗ್ರೂಪ್‌ ಇತ್ತು ಎಂಬುವುದಾಗಿ ಬರೆದಿದ್ದಾನೆ. ಪೊಲೀಸರು ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.ಇದೇ ಮಾದರಿಯ ಇಮೇಲ್‌ ಸಂದೇಶವನ್ನು ಒಂದೇ ದಿನ ದೇಶದ 41 ವಿಮಾನ ನಿಲ್ದಾಣಗಳಿಗೆ ಕಳಿಸಿದ್ದಾರೆ , ಒಂದೇ ಇಮೇಲ್‌ ಐಡಿಯಿಂದ ಸಂದೇಶ ಕಳಿಸಲಾಗಿದೆ. ಮೇ. ಮೊದಲ ವಾರದಲ್ಲಿ ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಹಾಕಲಾಗಿತ್ತು.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

3 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

11 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

18 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

42 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

48 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

58 minutes ago