ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್ ೧೮ ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು , ಏರ್‌ಪೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ.
ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಜೂನ್ 18 ರಂದು ಸಂಜೆ ಬಜ್ಪೆ ರಾಣೆಗೆ ದೂರು ನೀಡಿದ್ದಾರೆ.
ಅಪರಿಚಿತನೊರ್ವ ವಿಮಾನ ನಿಲ್ದಾಣದ ಎರಡು ಇಮೇಲ್ ಐಡಿಗಳಿಗೆ exhumedyou888@gmail.com ಇಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಕಳಿಸಿದ್ದಾನೆ.ವಿಮಾನ ನಿಲ್ದಾಣದ ಒಳಗಡೆ ಸ್ಪೋಟಕ ಸಾಮಗ್ರಿ ಅಡಗಿಸಿಟ್ಟಿದ್ದು, ಕೆಲವೇ ಕ್ಷಣದಲ್ಲಿ ಸ್ಪೋಟ ಅಗಲಿದೆ. ನೀವೆಲ್ಲ ಸಾಯಲಿದ್ದೀರಿ.
ಗ್ರೂಪ್ ಕೆಎನ್‌ಆರ್ ಇದರ ಹಿಂದಿದೆ. ಮೇ. 1ರ ಡೆಲ್ಲಿ ಸ್ಕೂಲ್ ಟ್ಯಾಕ್ ಕೃತ್ಯದಲ್ಲೂ ಇದೇ ಗ್ರೂಪ್ ಇತ್ತು ಎಂಬುವುದಾಗಿ ಬರೆದಿದ್ದಾನೆ. ಪೊಲೀಸರು ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.ಇದೇ ಮಾದರಿಯ ಇಮೇಲ್ ಸಂದೇಶವನ್ನು ಒಂದೇ ದಿನ ದೇಶದ 41 ವಿಮಾನ ನಿಲ್ದಾಣಗಳಿಗೆ ಕಳಿಸಿದ್ದಾರೆ , ಒಂದೇ ಇಮೇಲ್ ಐಡಿಯಿಂದ ಸಂದೇಶ ಕಳಿಸಲಾಗಿದೆ. ಮೇ. ಮೊದಲ ವಾರದಲ್ಲಿ ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…