ನವದೆಹಲಿ: ಭಾರತ- ಪಾಕಿಸ್ತಾನ ಗಡಿಯಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ‘ಸ್ಮಾರ್ಟ್ ಬೇಲಿ’ಯನ್ನು ಗೃಹಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಅನಾವರಣಗೊಳಿಸಲಿದ್ದಾರೆ.
ತಲಾ 5 ಕಿ.ಮೀ ವ್ಯಾಪ್ತಿಯಲ್ಲಿನ ಈ ಬೇಲಿ ಲೇಸರ್ ಚಾಲಿತ ತಂತ್ರಜ್ಞಾನವನ್ನು ಒಳಗೊಂಡಿದೆ. ಅರೆಸೇನಾ ಪಡೆಯು ಇದನ್ನು ಕಾರ್ಯಗತಗೊಳಿಸಿದೆ. ಜಮ್ಮುವಿನ ಮುಂಚೂಣಿ ಪ್ರದೇಶದಲ್ಲಿ ರಾಜನಾಥ್ ಸಿಂಗ್ ಅವರು ಈ ಬೇಲಿಯನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಎಸ್‌ಎಫ್‌ನ ಹಿರಿಯ ಅಧಿಕಾರಿಗಳು ಬೇಲಿಗೆ ಚಾಲನೆ ನೀಡುವುದು ಮತ್ತು ಅದರ ಪ್ರತಿಕ್ರಿಯಾ ಕಾರ್ಯತಂತ್ರದ ಪ್ರಾತ್ಯಕ್ಷಿಕೆಯನ್ನು ಗೃಹಸಚಿವರಿಗೆ ತೋರಿಸಲಿದ್ದಾರೆ.ಕಣ್ಗಾವಲು, ಸಂವಹನ ಮತ್ತು ದತ್ತಾಂಶ ಸಂಗ್ರಹಕ್ಕಾಗಿ ಸ್ಮಾರ್ಟ್ ಬೇಲಿಯಲ್ಲಿ ಸಾಕಷ್ಟು ಉಪಕರಣಗಳನ್ನು ಅಳವಡಿಸಲಾಗಿದೆ.
ದಿನದ 24 ಗಂಟೆ ಕಣ್ಗಾವಲು ನಡೆಸುವ ಈ ಬೇಲಿಯನ್ನು ದೂಳಿನ ಮಾರುತ, ಮಂಜು ಅಥವಾ ಮಳೆ ಹೀಗೆ ಯಾವುದೇ ಹವಾಮಾನದಲ್ಲೂ ಕೆಲಸ ಮಾಡುವಂತೆ ನಿರ್ಮಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…