ಬೆಂಗಳೂರು: ದಾಖಲೆ ಮತಗಳಿಂದ ಗೆಲುವು ಪಡೆದು ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ. ಇದು ಜನಸಾಮಾನ್ಯರಿಗೆ ಸಿಕ್ಕಿದ ಗೆಲುವು ಎಂದಿದ್ದಾರೆ.
ಸ್ವಾತಂತ್ರ್ಯದ ಬಳಿಕ ಮೊದಲ ಬಾರಿಗೆ ಒಬ್ಬ ಆದಿವಾಸಿ ಮಹಿಳೆಗೆ ರಾಷ್ಟ್ರಪತಿಯಾಗುವ ಅವಕಾಶ ಲಭಿಸಿದೆ. ಆದಿವಾಸಿ ಮಹಿಳೆಯಾದ ದ್ರೌಪದಿ ಮುರ್ಮು ಅವರು ತಾನು ಕಲಿಯುವ ವಾತಾವರಣ ಇಲ್ಲದೆ ಇದ್ದರೂ ಸುಶಿಕ್ಷಿತೆಯಾಗಿ ಕಲಿತು, ಸರಕಾರಿ ನೌಕರಿ, ಉಪನ್ಯಾಸಕಿ, ಕಾರ್ಪೊರೇಟರ್, ಶಾಸಕಿ, ಒಡಿಶಾ ಸರಕಾರದಲ್ಲಿ ಸಚಿವೆಯಾಗಿ ಹಲವು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಜಾರ್ಖಂಡ್ ರಾಜ್ಯದ ರಾಜ್ಯಪಾಲೆಯಾಗಿ ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ. ಭಾರತವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಗೌರವಕ್ಕೆ ಪಾತ್ರವಾಗಲಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಮರ್ಥ ಹಾಗೂ ಅನುಭವವುಳ್ಳ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜನಪರ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‍ಡಿಎ ಪಕ್ಷಗಳ ಮುಖಂಡರಿಗೆ ಅವರು ಧನ್ಯವಾದ ಸಮರ್ಪಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…