Featured

ನೂತನ ರೂಪಾಂತರಿತ ಕೋವಿಡ್ : ಬ್ರಿಟನ್ ವಿಮಾನಗಳಿಗೆ ಜನವರಿ 7ರವರೆಗೆ ನಿರ್ಬಂಧ -Vishwanews24

ರೂಪಾಂತರಿ ಕೋವಿಡ್ : ಬ್ರಿಟನ್ ವಿಮಾನಗಳಿಗೆ ಜನವರಿ 7ರವರೆಗೆ ನಿರ್ಬಂಧ -Vishwanews24

ನವದೆಹಲಿ: ನೂತನ ರೂಪಾಂತರಿತ ಕೋವಿಡ್ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬ್ರಿಟನ್ ನಿಂದ ಭಾರತಕ್ಕೆ ಆಗಮಿಸುವ ವಿಮಾನ ಸಂಚಾರದ ನಿಷೇಧವನ್ನು ಜನವರಿ 7ರವರೆಗೆ ವಿಸ್ತರಿಸಿರುವುದಾಗಿ ಬುಧವಾರ(ಡಿಸೆಂಬರ್ 30, 2020) ಕೇಂದ್ರ ಸರ್ಕಾರ ತಿಳಿಸಿದೆ.

ಭಾರತದಿಂದ ಬ್ರಿಟನ್ ಗೆ ಸಂಚರಿಸುವ ವಿಮಾನ ಯಾನವನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದ ದಿನಾಂಕವನ್ನು ಇದೀಗ ಜನವರಿಗೆ (2021) 7ರವರೆಗೆ ವಿಸ್ತರಿಸಲು ನಿರ್ಧಾರ ತೆಗೆದುಕೊಂಡಿರುವುದಾಗಿ ಭಾರತ ಸರ್ಕಾರ ಹೇಳಿದೆ.

ಬ್ರಿಟನ್ ನಲ್ಲಿ ರೂಪಾಂತರಿತ ಕೋವಿಡ್ ವೈರಸ್ ಪತ್ತೆಯಾದ ನಂತರ ಭಾರತ ಡಿಸೆಂಬರ್ 23ರಿಂದ 31ರವರೆಗೆ ಬ್ರಿಟನ್ ವಿಮಾನ ಸಂಚಾರವನ್ನು ನಿಷೇಧಿಸಿತ್ತು.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿದ್ದ 20 ಮಂದಿಗೆ ನೂತನ ರೂಪಾಂತರಿತ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದೆ. ಮಂಗಳವಾರ ಆರು ಮಂದಿಯಲ್ಲಿ ನೂತನ ಕೋವಿಡ್ ಸೋಂಕು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್ ನಲ್ಲಿ ಇರಿಸಲಾಗಿದ್ದು, ಅವರ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಅಲ್ಲದೇ ಬ್ರಿಟನ್ ನಿಂದ ಆಗಮಿಸಿದ್ದವರ ಸಹ ಪ್ರಯಾಣಿಕರು, ಕುಟುಂಬದ ಸಂಪರ್ಕಿತರು ಹಾಗೂ ಇತರರನ್ನು ಕೂಡಾ ಪತ್ತೆ ಹಚ್ಚಲಾಗುತ್ತಿದೆ. ನೂತನ ರೂಪಾಂತರಿತ ಕೋವಿಡ್ ಸೋಂಕಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

13 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

13 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

20 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

21 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

21 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

3 days ago