ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ನೂತನ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುಉದ್ದೇಶಿಸಿ ಮಾತನಾಡಿ, ಇಂದು ಐತಿಹಾಸಿಕ ದಿನವಾಗಿದೆ ಎಂಬುದಾಗಿ ಹೇಳಿದರು.
‘ಸಂಸತ್ ಭವನದ ಶಂಕುಸ್ಥಾಪನೆ ನೆರವೇರಿಸಿ ಇಂದು ಐತಿಹಾಸಿಕ ದಿನವಾಗಿದೆ. ಭಾರತದ ಜನತೆ ಸೇರಿ ಸಂಸತ್ತಿನ ಈ ಹೊಸ ಕಟ್ಟಡವನ್ನು ನಿರ್ಮಿಸುತ್ತೇವೆ’ ಎಂದು ಅವರು ಹೇಳಿದರು.
‘ಈ ಐತಿಹಾಸಿಕ ಕ್ಷಣವನ್ನು ನಾವು ನೋಡುತ್ತಿರುವಾಗ 130 ಕೋಟಿ ಭಾರತೀಯರ ಹೆಮ್ಮೆಯ ದಿನ. ಹೊಸ ಸಂಸತ್ ಕಟ್ಟಡವು ಹೊಸ ಮತ್ತು ಹಳೆಯ ಸಹಜೀವನಕ್ಕೆ ಒಂದು ಉದಾಹರಣೆಯಾಗಿದೆ. ಇದು ಸಮಯ ಮತ್ತು ಅಗತ್ಯಗಳಿಗೆ ಅನುಗುಣವಾಗಿ ತನ್ನೊಳಗೆ ಬದಲಾವಣೆಗಳನ್ನು ಮಾಡಿಕೊಳ್ಳುವ ಪ್ರಯತ್ನವಾಗಿದೆ’ ಎಂದು ಅವರು ಹೇಳಿದರು.
ಅಂದಹಾಗೇ, ರಾಷ್ಟ್ರಪತಿಗಳ ಅರಮನೆ ರಾಷ್ಟ್ರಪತಿ ಭವನದಿಂದ ಐಕಾನಿಕ್ ಯುದ್ಧ ಸ್ಮಾರಕ ಇಂಡಿಯಾ ಗೇಟ್ ವರೆಗೆ 3 ಕಿ.ಮೀ.ರಾಜಪಥ್ ನ ಭಾಗವಾಗಿರುವ ಸರ್ಕಾರಿ ಕಟ್ಟಡಗಳನ್ನು ನಿರ್ಮಾಣ ಮತ್ತು ನವೀಕರಿಸುವ ಗುರಿಹೊಂದಿರುವ ₹ 20,000 ಕೋಟಿ ವೆಚ್ಚದ ಸೆಂಟ್ರಲ್ ವಿಸ್ಟಾ ಯೋಜನೆಯ ಮುಖ್ಯ ಭಾಗ ನೂತನ ಸಂಸತ್ ಭವನ ನಿರ್ಮಾಣವಾಗುತ್ತಿದೆ.
ಪ್ರಸ್ತಾವಿತ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ವಿಸ್ತಾರವಾಗಿದ್ದು, ಅಂದಾಜು ₹ 971 ಕೋಟಿ ವೆಚ್ಚವಾಗಲಿದೆ. 2022ರ ಆಗಸ್ಟ್ ನಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಈ ಕಟ್ಟಡ ನಿರ್ಮಾಣ ಕಾರ್ಯ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…