Featured

ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಿ ಮೋದಿಯಿಂದ ಶಿಲಾನ್ಯಾಸ -Vishwanews24

ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಿ ಮೋದಿಯಿಂದ ಶಿಲಾನ್ಯಾಸ -Vishwanews24

ನವದೆಹಲಿ : ಬರೋಬ್ಬರಿ 917 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಿರ್ಮಿಸಲಿರುವ 971 ಕೋಟಿ ರು. ವೆಚ್ಚದ ನೂತನ ಸಂಸತ್‌ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಮಧ್ಯಾಹ್ನ 1 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಿ ಭೂಮಿ ಪೂಜೆ ಮಾಡಲಿದ್ದಾರೆ. ವಿಶೇಷವೆಂದರೆ ಭೂಮಿ ಪೂಜಾ ಕಾರ್ಯಕ್ರಮದ ಹೊಣೆ ಶೃಂಗೇರಿ ಮಠದ ಪುರೋಹಿತರಿಂದ ನಡೆಯಲಿದೆ.

ಹೊಸ ಸಂಸತ್ ಭವನದ ಭೂಮಿ ಪೂಜೆ ನೆರವೇರಿಸಿದ ಹೆಮ್ಮೆ ಕರ್ನಾಟಕಕ್ಕೆ ಸಿಗಲಿದೆ. ಹಿರಿಯ ಪುರೋಹಿತ ನಾಗರಾಜ ಅಡಿಗ ನೇತೃತ್ವದಲ್ಲಿ ಆರು ಮಂದಿ ಯ ತಂಡ ದೆಹಲಿಗೆ ತಲುಪಿದ್ದು, ಇಂದು ಬೆಳಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳು ಶುರುವಾಗಲಿವೆ. ಮಧ್ಯಾಹ್ನ 12:40 ರಿಂದ 1:15 ಗಂಟೆಗೆ ಯೊಳಗೆ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಇಡೀ ಕಟ್ಟಡ ಭೂಕಂಪ ನಿರೋಧಕ ಶಕ್ತಿ ಹೊಂದಿರಲಿದೆ. ನಿರ್ಮಾಣ ಕಾಮಗಾರಿಯಲ್ಲಿ ಪ್ರತ್ಯಕ್ಷವಾಗಿ 2000, ಪರೋಕ್ಷವಾಗಿ 9000 ಜನ ಭಾಗಿಯಾಗಲಿದ್ದಾರೆ.

ಮುಂದೆ ಸಂಸದರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭವಿಷ್ಯದ 100 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಭವನವನ್ನು ನಿರ್ಮಿಸಲಾಗುತ್ತಿದೆ.ಆಸನಗಳು 60 ಸೆಂ.ಮೀ. ಅಗಲ ಮತ್ತು 40 ಸೆಂ.ಮೀ. ಎತ್ತರ ಇರಲಿದೆ. ನಾಲ್ಕು ಮಹಡಿಗಳನ್ನು ಹೊಂದಿರಲಿದ್ದು, ಆರು ಪ್ರವೇಶದ್ವಾರಗಳನ್ನು ಹೊಂದಿರಲಿದೆ.ಜಂಟಿ ಅಧಿವೇಶನ ನಡೆಯುವ ಸಮಯದಲ್ಲಿ ಹೊಸ ಲೋಕಸಭೆಯಲ್ಲಿ 1,224 ಸದಸ್ಯರಿಗೆ ಕೂರಲು ಅವಕಾಶ ಕಲ್ಪಿಸಬಹುದಾಗಿದೆ.ನೂತನ ಸಂಸತ್ ಭವನದ ಕಟ್ಟಡವನ್ನು ನಿರ್ಮಿಸುವ ಸೆಂಟ್ರಲ್ ವಿಸ್ಟಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಕೆಲವು ದಿನಗಳ ಹಿಂದಷ್ಟೇ ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು.ಪ್ರಸ್ತುತ ಇರುವ ಸಂಸತ್ ಭವನಕ್ಕೆ 1921ರಲ್ಲಿ ಶಂಕು ಸ್ಥಾಪನೆ ನೆರವೇರಿಸಿ 83 ಲಕ್ಷ ರೂ. ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಿಸಿ 1927ರ ಜನವರಿ 18ರಂದು ಉದ್ಘಾಟಿಸಲಾಗಿತ್ತು

ಎರಡು ವರ್ಷದೊಳಗೆ ಹೊಸ ಸಂಸತ್‌ ಭವನ ನಿರ್ಮಾಣ ಪೂರ್ಣಗೊಳಿಸಿ 75ನೇ ಸ್ವಾತಂತ್ರ್ಯೋತ್ಸವವನ್ನು ಅಲ್ಲೇ ಆಚರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಹೊಸ ಸಂಸತ್‌ ಭವನ ಒಟ್ಟು 64,500 ಚದರ ಮೀಟರ್‌ ವಿಸ್ತೀರ್ಣ ಹೊಂದಿರಲಿದೆ.

 

 

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

3 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

5 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

6 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

6 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

6 hours ago