ಬೆಂಗಳೂರು: ಕರ್ನಾಟಕದ ಮೂವತ್ತನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇದೀಗ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ನಿರ್ಗಮಿತ ಸಿಎಂ ಯಡಿಯೂರಪ್ಪ ಕೂಡ ಇದ್ದರು. ಇನ್ನು ನೂತನ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಮಗೆ ಶುಭಾಶಯ. ಬೊಮ್ಮಾಯಿಯವರು ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತರುತ್ತಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಅದ್ಭುತ ಕಾರ್ಯಗಳನ್ನು ಅವರು ಕಾರ್ಯಗತಗೊಳಿಸುವ ವಿಶ್ವಾಸ ನನಗಿದೆ. ಮುಂದಿನ ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು ಎಂದಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…