ನವದೆಹಲಿ: ಹಿಂದೂ ದೇವರ ಅವಹೇಳನ ಮಾಡಿದ್ದನ್ನು ವಿರೋಧಿಸಿ ಪ್ರವಾದಿ ಮೊಹಮ್ಮದ್ ಕುರಿತಂತೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರಿಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ನೂಪುರ್ ಅವರನ್ನು ಬಂಧಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಕೋರ್ಟ್ ತಿರಸ್ಕರಿಸಿದೆ.
ಹಿಂದೂ ದೇವರ ಅವಹೇಳನವನ್ನು ಸಹಿಸದೇ ನೂಪುರ್ ಅವರು ಪ್ರವಾದಿ ಮೊಹಮ್ಮದ್ ಕುರಿತು ನೀಡಿದ್ದ ಹೇಳಿಕೆ ಭಾರತದ ಒಂದು ವರ್ಗ ಹಾಗೂ ಹಲ ಮುಸ್ಲಿಂ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹೇಳಿಕೆ ಹಿಂಸಾಚಾರ ಸ್ವರೂಪವನ್ನೂ ಪಡೆದುಕೊಂಡಿದ್ದು, ಹಲವು ಕಡೆಗಳಲ್ಲಿ ಭಾರಿ ಪ್ರತಿಭಟನೆಗಳೂ ನಡೆದಿವೆ. ಈ ನಡುವೆಯೇ ಇವರನ್ನು ಬಂಧಿಸಲು ಆದೇಶಿಸುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ತನ್ನ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಗವಿಯಪ್ಪ – Vishwanews24
ಆದರೆ ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ಪೀಠ ನಿರಾಕರಿಸಿದೆ. ‘ನ್ಯಾಯಾಲಯವು ಯಾವುದೇ ಒಂದು ತೀರ್ಪನ್ನು ನೀಡುವಾಗ ದೂರಗಾಮಿ ಪರಿಣಾಮಗಳನ್ನೂ ಅವಲೋಕಿಸಬೇಕಾಗುತ್ತದೆ. ಅವರನ್ನು ಬಂಧಿಸಿ ಎಂದು ನೀವು ಸರಳವಾಗಿ ಹೇಳಿಬಿಟ್ಟರೆ ಆಗುವುದಿಲ್ಲ. ನಿಜವಾಗಿಯೂ ಆಗಿರುವುದೇನು? ಇಂಥ ಆದೇಶಗಳನ್ನು ಹೊರಡಿಸಿದರೆ ಅದರಿಂದ ಆಗುವ ಪರಿಣಾಮಗಳ ಬಗ್ಗೆಯೂ ಕೋರ್ಟ್ ಯೋಚನೆ ಮಾಡಬೇಕಾಗುತ್ತದೆ’ ಎಂದು ನ್ಯಾಯಮೂರ್ತಿಗಳು ಹೇಳಿದರು.
ಆದ್ದರಿಂದ ಈ ಅರ್ಜಿಯನ್ನು ಸುಮ್ಮನೇ ಹಿಂದಕ್ಕೆ ಪಡೆದುಕೊಳ್ಳುವುದು ಉತ್ತಮ ಎಂದರು. ಇದಕ್ಕೆ ಅನುಮತಿ ನೀಡಿದ ಅರ್ಜಿದಾರರ ಪರ ವಕೀಲರು, ಅರ್ಜಿಯನ್ನು ಹಿಂದಕ್ಕೆ ಪಡೆದುಕೊಂಡರು. ಈ ಹಿನ್ನೆಲೆಯಲ್ಲಿ ಅರ್ಜಿಗೆ ಮಾನ್ಯತೆ ಇಲ್ಲ ಎಂದ ಕೋರ್ಟ್ ಅದನ್ನು ವಜಾಗೊಳಿಸಿತು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…