Featured

ನೂರಾರು ಮುಸಲ್ಮಾನ ಬಾಂಧವರಿಂದ ಮಳೆಗಾಗಿ ವಿಶೇಷ ಪ್ರಾರ್ಥನೆ -Vishwanews24

ಮಂಗಳೂರು: ಇಲ್ಲಿನ ನೆಹರು ಮೈದಾನದಲ್ಲಿ ಬುಧವಾರ ಬೆಳಿಗ್ಗೆ 7 ಗಂಟೆಗೆ ಮುಸ್ಲಿಂ ಬಾಂಧವರು ಶೇಖ್ ಸಕೀಬ್ ಸಲೀಂ ಉಮ್ರಿ ಅವರ ನೇತೃತ್ವದಲ್ಲಿ ನೂರಾರು ಮಂದಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕರಾವಳಿ ಭಾಗದ ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೂಡ ಕುಡಿಯುವ ನೀರಿಗೆ ತತ್ವಾರ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಮಾಸದಲ್ಲಿ ದೇವರಿಗೆ ಮೊರೆ ಹೋದರೆ ಸಂಕಷ್ಟಗಳು ಈಡೇರುತ್ತವೆ ಎಂಬ ಭಾವನೆಯಿಂದ ಎಲ್ಲರೂ ಒಟ್ಟಾಗಿ ಸೇರಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.

ಅಲ್ಲಾಹ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ  ಮಳೆ ಬರುತ್ತದೆ. ಜನರಿಗೆ ಬಂದಿರುವಂತಹ ಕಷ್ಟಗಳು ದೂರಾಗಲಿವೆ. ಮಳೆ ಬಂದರೂ ಕಷ್ಟ, ಮಳೆ ಬಾರದೇ ಇದ್ದರೂ ಕಷ್ಟ, ಈಗ ಜನರ ಬವಣೆ ನೀಗಿಸಲು ಮಳೆ ಬರಲೇಬೇಕು. ಕುಡಿಯುವ ನೀರಿಗಾಗಿ ಪರಿತಪಿಸುವ ಜನರ ಕಷ್ಟಕ್ಕೆ ಅಲ್ಲಾಹ ಕೃಪೆ ತೋರಲಿ. ಶುದ್ಧ ಮನಸ್ಸಿನಿಂದ ಪವಿತ್ರ ರಂಜಾನ್ ಮಾಸದಲ್ಲಿ ಅಲ್ಲಾಹ ಮೊರೆ ಹೋಗಿದ್ದೇವೆ ಎಂದು ಶೇಖ್ ಸಕಿಬ್ ಸಲೀಂ ಉಮ್ರಿ ಹೇಳಿದರು.

‘ರಂಜಾನ್’ ಎಂದು ಅರಬ್ಬಿ ಭಾಷೆಯಲ್ಲಿ ಕರೆಯಲಾಗುವ ಈ ತಿಂಗಳು ಮುಸ್ಲಿಮರ ಪಾಲಿಗೆ ಬಹಳ ಶ್ರೇಷ್ಠ ತಿಂಗಳು. ಈ ತಿಂಗಳು ಪೂರ್ತಿ ಜಗತ್ತಿನ ಎಲ್ಲಾ ಪ್ರದೇಶಗಳಲ್ಲಿ ಚದುರಿ ಹೋಗಿರುವ ಮುಸ್ಲಿಮರು ಏಕಕಾಲದಲ್ಲಿ ಜತೆಯಾಗಿ ಉಪವಾಸವನ್ನು ಆಚರಿಸುವುದು ಈ ತಿಂಗಳ ವಿಶೇಷತೆ. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸುತ್ತಾರೆ.

ಈ ಸಂದರ್ಭದಲ್ಲಿ ಹಲವಾರು ಮುಸ್ಲಿಂ ಮುಖಂಡರು , ಮಹಿಳೆಯರು ಕೂಡ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಶಾಸಕ ವೇದವ್ಯಾಸ್ ಕಾಮತ್ ಕೂಡ ಪಾಲ್ಗೊಂಡಿದ್ದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

23 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago