Featured

ನೆಲಮಂಗಲ : ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್‌ ; ಅದೃಷ್ಟವಶಾತ್‌ ಪ್ರಯಾಣಿಕರು ಪಾರು – vishwanews24

ನೆಲಮಂಗಲ : ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್‌ ; ಅದೃಷ್ಟವಶಾತ್‌ ಪ್ರಯಾಣಿಕರು ಪಾರು

ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.

ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ  ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನೆಲಮಂಗಲ ಸಂಚಾರ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ರಾಯಚೂರಿಗೆ  ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾದ ಘಟನೆ ನಡೆದಿತ್ತು. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್‌ ಆಗಿದ್ದರು. ಇದಕ್ಕೂ ಮುನ್ನ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್‌ ಸ್ಲೀಪರ್‌ ಬಸ್‌ ಬೆಂಕಿಗೆ ಆಹುತಿಯಾಗಿತ್ತು. ಈ ವೇಳೆ 29 ಜನ ಪ್ರಯಾಣಿಸುತ್ತಿದ್ದರು. ಆದ್ರೆ ಈ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿತ್ತು. ಇದೀಗ ಮತ್ತೊಂದು ದುರಂತ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

8 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

8 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

11 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago