ನೆಲ್ಯಾಡಿ: ಮದುವೆ ವಾರ್ಷಿಕೋತ್ಸವ ದಿನದಂದು ಬೈಕ್ ಅಪಘಾತ – ಪತ್ನಿ ಸಾವು : ಪತಿ ,ಮಕ್ಕಳು ಪಾರು – Vishwanews24

Featured, ದಕ್ಷಿಣ ಕನ್ನಡ

ನೆಲ್ಯಾಡಿ: ಮದುವೆ ವಾರ್ಷಿಕೋತ್ಸವ ದಿನದಂದು ಅಪಘಾತ ಬೈಕ್ ಪಲ್ಟಿಯಾಗಿ ಪತ್ನಿ ಸಾವು : ಪತಿ ,ಮಕ್ಕಳು ಪಾರು – Vishwanews24

ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಡಿ.15ರಂದು ಬೆಳಿಗ್ಗೆ ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೆರಾಬೆ ಗ್ರಾಮದ ಅತ್ರಿಮಜಲು ನಿವಾಸಿ ದಿನೇಶ್ ಎಂಬವರ ಪತ್ನಿ ಗೀತಾ (30) ಮೃತಪಟ್ಟವರು. ದಿನೇಶ್​, ಗೀತಾ ಹಾಗೂ ಅವರ ಇಬ್ಬರು ಮಕ್ಕಳು ಡಿ.15ರಂದು ಬೆಳಗ್ಗೆ ಬೈಕ್​ನಲ್ಲಿ ಆಲಂಕಾರು-ನೆಲ್ಯಾಡಿ ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ನೆಲ್ಯಾಡಿ ಗ್ರಾಮದ ಕೊಂತ್ರಿಜಾಲು ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಬೈಕ್​ ಪಲ್ಟಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಗೀತಾ ಗಂಭೀರವಾಗಿ ಗಾಯಗೊಂಡಿದ್ದರು. ಸವಾರ ದಿನೇಶ್​ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿತ್ತು.ಗಂಭೀರವಾಗಿ ಗಾಯಗೊಂಡಿದ್ದ ಗೀತಾರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ತಿಮ್ಮಪ್ಪ ಗೌಡ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

18-12-2021 : ಇಂದಿನ ದಿನ ಭವಿಷ್ಯ -Vishwanews24