ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಡಿ.15ರಂದು ಬೆಳಿಗ್ಗೆ ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪೆರಾಬೆ ಗ್ರಾಮದ ಅತ್ರಿಮಜಲು ನಿವಾಸಿ ದಿನೇಶ್ ಎಂಬವರ ಪತ್ನಿ ಗೀತಾ (30) ಮೃತಪಟ್ಟವರು. ದಿನೇಶ್, ಗೀತಾ ಹಾಗೂ ಅವರ ಇಬ್ಬರು ಮಕ್ಕಳು ಡಿ.15ರಂದು ಬೆಳಗ್ಗೆ ಬೈಕ್ನಲ್ಲಿ ಆಲಂಕಾರು-ನೆಲ್ಯಾಡಿ ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ನೆಲ್ಯಾಡಿ ಗ್ರಾಮದ ಕೊಂತ್ರಿಜಾಲು ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಬೈಕ್ ಪಲ್ಟಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಗೀತಾ ಗಂಭೀರವಾಗಿ ಗಾಯಗೊಂಡಿದ್ದರು. ಸವಾರ ದಿನೇಶ್ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿತ್ತು.ಗಂಭೀರವಾಗಿ ಗಾಯಗೊಂಡಿದ್ದ ಗೀತಾರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ತಿಮ್ಮಪ್ಪ ಗೌಡ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…