Featured

ನೆಲ್ಯಾಡಿ : ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ; ಪಿಗ್ಮಿ ಸಂಗ್ರಾಹಕ ನಾಪತ್ತೆ  – Vishwanews24

ನೆಲ್ಯಾಡಿ : ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ; ಪಿಗ್ಮಿ ಸಂಗ್ರಾಹಕ ನಾಪತ್ತೆ  – Vishwanews24

ನೆಲ್ಯಾಡಿ : ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26ವ)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು, ಇವರು ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ಈ ಮಧ್ಯೆ ಜ.18ರಂದು ಮಧ್ಯಾಹ್ನದ ವೇಳೆಗೆ ಪತ್ರಿಕೆಯೊಂದರ ವರದಿಗಾರರಿಗೆ ವಾಟ್ಸಫ್ ಕರೆ ಮಾಡಿರುವ ಪ್ರವೀಣ್ ಕುಮಾರ್, ನಾನು ಬಿಹಾರದಲ್ಲಿದ್ದು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ.

ಪ್ರವೀಣ್‌ಕುಮಾರ್‌ರವರು ಕಳೆದ 10 ಕ್ಕೂ ಹೆಚ್ಚು ವರ್ಷಗಳಿಂದ ನೆಲ್ಯಾಡಿಯಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದು ಚಿರಪರಿಚಿತರಾಗಿದ್ದರು. ಇಲ್ಲಿನ ಅಡಿಕೆ ವ್ಯಾಪಾರಿಗಳು, ನೆಲ್ಯಾಡಿಯ ಪ್ರತಿಷ್ಠಿತ ಉದ್ಯಮಿಗಳು ಸೇರಿದಂತೆ ಹಲವು ಮಂದಿಯ ವಿಶ್ವಾಸಗಳಿಸಿಕೊಂಡಿದ್ದ ಅವರು ಕೆಲವರಿಂದ ಲಕ್ಷಕ್ಕೂ ಮಿಕ್ಕಿ ಕೈ ಸಾಲ ಪಡೆದುಕೊಂಡು ಹಿಂತಿರುಗಿಸಲಾಗದೆ ಈಗ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಚಿಟ್‌ಫಂಡ್‌ನಲ್ಲೂ ಇವರಿಂದ ಕೆಲವರಿಗೆ ಮೋಸ ಆಗಿದೆ ಎಂಬ ದೂರುಗಳು ಕೇಳಿಬಂದಿವೆ. ಇವರು ಹಲವು ಮಂದಿಯಿಂದ ರೂ.55ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿದ್ದರು ಎಂದು ಹೇಳಲಾಗಿದೆ. ಪ್ರವೀಣ್‌ಕುಮಾರ್‌ರವರು ಜ.3ರಿಂದ ನಾಪತ್ತೆಯಾಗಿದ್ದು ಅವರ ಮೊಬೈಲ್ ಈಗ ಸ್ವಿಚ್ಡ್ ಆಫ್ ಆಗಿದೆ. ಪ್ರವೀಣ್ ನೆಲ್ಯಾಡಿ ವರ್ತಕ ಸಂಘದ ಕಾರ್ಯದರ್ಶಿಯೂ ಆಗಿದ್ದರು. ಮನೆಯವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಜ.18ರಂದು ಮಧ್ಯಾಹ್ನದ ವೇಳೆಗೆ ಸುದ್ದಿಬಿಡುಗಡೆ ಪತ್ರಿಕೆಯ ನೆಲ್ಯಾಡಿ ವರದಿಗಾರರಿಗೆ ಕರೆ ಮಾಡಿರುವ ಪ್ರವೀಣ್‌ಕುಮಾರ್‌ರವರು ನಾನು ಬಿಹಾರದಲ್ಲಿದ್ದು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿದ್ದೇನೆ ಎಂದಿದ್ದಾರೆ. 1 ವರ್ಷದ ಹಿಂದೆ ನಾನು ಪೆರಿಯಶಾಂತಿಯಲ್ಲಿದ್ದ ವೇಳೆ ಫಾರ್ಚೂನರ್ ಕಾರೊಂದರಲ್ಲಿ ಬಂದವರು ನಾವು ನೆಲ್ಯಾಡಿಯಲ್ಲಿ ಹೊಸ ಉದ್ದಿಮೆ ಆರಂಭಿಸುತ್ತೇವೆ ಎಂದು ಹೇಳಿ ನೆಲ್ಯಾಡಿಯ ಪ್ರತಿಷ್ಠಿತ ಉದ್ಯಮಿಗಳ ಬಗ್ಗೆ ನನ್ನಲ್ಲಿ ವಿಚಾರಿಸಿ ಹೋಗಿದ್ದರು. ಆ ಬಳಿಕ ಅವರು ನನ್ನೊಂದಿಗೆ ಸಂಪರ್ಕದಲ್ಲಿದ್ದು ಹಣ ದ್ವಿಗುಣಗೊಳಿಸುವುದಾಗಿ ಹೇಳಿ ಈ ತನಕ ನನ್ನಿಂದ ಸುಮಾರು 35 ಲಕ್ಷ ರೂ., ಪಡೆದುಕೊಂಡಿದ್ದಾರೆ. ಇದಕ್ಕೆ 70 ಲಕ್ಷ ರೂ.,ನೀಡುವುದಾಗಿ ಹೇಳಿ ಜ.3ರಂದು ನನ್ನನ್ನು ಶಿವಮೊಗ್ಗಕ್ಕೆ ಬರಲು ಹೇಳಿದ್ದು ಅದರಂತೆ ನಾನು ಶಿವಮೊಗ್ಗಕ್ಕೆ ಹೋದಾಗ ಅಲ್ಲಿಂದ ನನ್ನನ್ನು ಬಿಹಾರಕ್ಕೆ ಕರೆದುಕೊಂಡು ಹೋಗಿದ್ದಾರೆ. ನಾವು ಛೋಟಾ ರಾಜನ್ ಗ್ಯಾಂಗ್‌ನವರು ಎಂದು ಅವರು ನನ್ನಲ್ಲಿ ಹೇಳುತ್ತಿದ್ದು ಅವರ ಕಣ್ಣುತಪ್ಪಿಸಿ ಅವರದ್ದೇ ಮೊಬೈಲ್‌ನಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ನೆಲ್ಯಾಡಿಯಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ.,ಪಡೆದು ವಂಚಿಸಿ ನಾಪತ್ತೆಯಾಗಿರುವ ಪ್ರವೀಣ್‌ಕುಮಾರ್‌ರವರ ಈ ನಡೆ ಅನುಮಾನಕ್ಕೆ ಕಾರಣವಾಗಿದೆ.

ಇನ್ನು ಜ.3ರಂದು ಮಧ್ಯಾಹ್ನದ ಬಳಿಕ ಪ್ರವೀಣ್ ನಾಪತ್ತೆಯಾಗಿದ್ದು ಅವರು ನಾಪತ್ತೆಯಾದ ಎರಡು ದಿನದ ಬಳಿಕ ಅವರ ಕೋಣೆಯಲ್ಲಿ ಶಿವಮೊಗ್ಗಕ್ಕೆ ಚಿಕಿತ್ಸೆಗೆ ಹೋಗುವುದಾಗಿ ಬರೆದಿದ್ದ ಚೀಟಿಯೊಂದು ಪತ್ತೆಯಾಗಿದೆ. ಪ್ರವೀಣ್‌ರವರು ನರಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೆ ಆತ ಚಿಕಿತ್ಸೆಗೆ ಹೋಗಿರಬಹುದೆಂದು ನಾವು ಶಿವಮೊಗ್ಗಕ್ಕೆ ತೆರಳಿ ಹಲವು ಆಸ್ಪತ್ರೆಗಳಲ್ಲಿ ವಿಚಾರಿಸಿದ್ದೇವೆ. ಆದರೂ ಅವರ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದ ಹಿನ್ನೆಲೆಯಲ್ಲಿ ಜ.೮ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ ಎಂದು ಪ್ರವೀಣ್‌ರವರ ಅಣ್ಣ ರವಿಯವರು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago