Featured

ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ : ಸಿದ್ದರಾಮಯ್ಯ – vishwanews24

ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳು ಸೃಷ್ಟಿಸುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು : ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ವಿವರಿಸಿದರು.

ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದನ್ನು ವಿವರಿಸಿದರು. ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.

ಆಹಾರ ಕ್ರಾಂತಿ, ಹಸಿರು ಕ್ರಾಂತಿಯ ಜೊತೆಗೆ ವಿಜ್ಞಾನ-ತಂತ್ರಜ್ಞಾನದ ಪ್ರಗತಿಗೆ ಕಾರ್ಯಕ್ರಮಗಳು, ತಾಂತ್ರಿಕ‌ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸುವ ಮೂಲಕ , ತಾಂತ್ರಿಕ ಕ್ಷೇತ್ರ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ಕೂಡ ಆದ ನೆಹರೂ ಅವರ ಕೊಡುಗೆಯನ್ನು ಬಿಜೆಪಿ , RSS ಎಷ್ಟೇ ಅಳಿಸಲು ಹೆಣಗಾಡಿದರೂ ಅದು ಸಾಧ್ಯವಾಗುತ್ತಿಲ್ಲ ಎಂದರು. ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ RSS, BJP ಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದರು.

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, RSS ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದ್ದಾರೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago