ನೇಜಾರು ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸರು ಅಭಿನಂದನಾರ್ಹರು : ಹಮ್ಮದ್ ಉಡುಪಿ – vishwanews24

Featured, ಉಡುಪಿ

ನೇಜಾರು ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸರು ಅಭಿನಂದನಾರ್ಹರು : ಹಮ್ಮದ್ ಉಡುಪಿ

ಉಡುಪಿ: ಉಡುಪಿ ಸಮೀಪದ ನೇಜಾರುವಿನಲ್ಲಿ ನಡೆದ ನಾಲ್ಕು ಮಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸರು ಅಭಿನಂದನಾರ್ಹರು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಹೇಳಿದ್ದಾರೆ.

ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ನಾಲ್ವರ ಭೀಕರ ಕೊಲೆ ಪ್ರಕರಣ ಉಡುಪಿ ಜಿಲ್ಲೆಯ ಮಟ್ಟಿಗೆ ಒಂದು ರೀತಿಯ ಕಪ್ಪು ಚುಕ್ಕೆಯಾಗಿತ್ತು. ಘಟನೆಯಿಂದಾಗಿ ಜನರು ಭಯಭೀತರಾಗಿದ್ದು ಜಿಲ್ಲೆಯ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ಕ್ಷಿಪ್ರ ಕಾರ್ಯಚರಣೆ ನಡೆಸಿ 5 ತನಿಖಾ ತಂಡಗಳನ್ನು ರಚಿಸಿ ಘಟನೆ ನಡೆದ ಮೂರು ದಿನಗಳ ಒಳಗಡೆ ಆರೋಪಿಯ ಜಾಡನ್ನು ಹುಡುಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ – vishwanews24

ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ. ಹಾಗೂ ಅವರ ತಂಡಕ್ಕೆ ಉಡುಪಿ ಜನತೆಯ ಪರವಾಗಿ ಪತ್ರಿಕಾ ಪ್ರಕಟಣೆಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply