Featured

ನೇಜಾರು ಹತ್ಯೆ ಪ್ರಕರಣ – ಆರೋಪಿಯನ್ನು ಕೂಡಲೇ ಬಂಧಿಸುವಂತೆ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ್ ರಾವ್ ಆಗ್ರಹ – vishwanews24

ನೇಜಾರು ಹತ್ಯೆ ಪ್ರಕರಣ – ಆರೋಪಿಯನ್ನು ಕೂಡಲೇ ಬಂಧಿಸುವಂತೆ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ್ ರಾವ್ ಆಗ್ರಹ

ಉಡುಪಿ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ್ ರಾವ್ ಆಗ್ರಹಿಸಿದ್ದಾರೆ.

ಹಾಡಹಗಲೇ ಅಪರಿಚಿತ ವ್ಯಕ್ತಿಯೋರ್ವ ಮನೆಗೆ ನುಗ್ಗಿ ತಾಯಿ ಮತ್ತು ಮಕ್ಕಳನ್ನು ಬೀಭತ್ಸವಾಗಿ ಕೊಚ್ಚಿ ಕೊಲೆ ಮಾಡಿ ತೆರಳಿರುವುದು ಉಡುಪಿ ಜಿಲ್ಲೆಯನ್ನು ಬೆಚ್ಚಿ ಬೀಳಿಸುವಂತಾಗಿದೆ. ಇಡೀ ಕುಟುಂಬವನ್ನು ಭೀಕರವಾಗಿ ಕೊಲೆ ಮಾಡಿ ಸರ್ವ ನಾಶ ಮಾಡಿರುವುದು ಸ್ಥಳೀಯ ನಿವಾಸಿಗಳಲ್ಲಿ ಅತಂಕ ಮತ್ತು ಅಭದ್ರತೆ ಮೂಡಲ ಕಾರಣವಾಗಿದೆ. ಜಿಲ್ಲೆಯಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ವರ ಹತ್ಯೆ ಅತ್ಯಂತ ಅಮಾನುಷ ಕೃತ್ಯವಾಗಿದ್ದು ತೀವ್ರ ಖಂಡನೀಯವಾಗಿದೆ.

ನೇಜಾರಿನಲ್ಲಿ ನಡೆದಿರುವ ಘಟನೆಯಿಂದ ಮಹಿಳೆಯರು ಮತ್ತು ಮಕ್ಕಳು ಏಕಾಂಗಿಯಾಗಿ ಮನೆಯಲ್ಲಿ ವಾಸಿಸಲು ಭಯಪಡುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ದಕ್ಷ ಪೊಲೀಸ್ ವರಿಷ್ಠಾಧಿಕಾರಿಯಿಂದ ಕೊಲೆಯ ಸಂಚನ್ನು ಭೇಧಿಸಿ ಆರೋಪಿಯನ್ನು ಕೂಡಲೇ ಬಂಧಿಸಭೇಕು. ನಗರದೆಲ್ಲೆಡೆ ಸಿಸಿ ಟಿವಿ ಕ್ಯಾಮಾರಾಗಳಿದ್ದರೂ ಕೂಡ ಯಾವುದೂ ಕಾರ್ಯಾಚರಿಸುತ್ತಿಲ್ಲ. ಇದರ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಗಮನಹರಿಸಿ ನಾಗರಿಕರ ರಕ್ಷಣೆಯನ್ನು ಮಾಡಬೇಕಾಗಿದೆ.

ಪೊಲೀಸ್ ಇಲಾಖೆ ತಾಯಿ ಮತ್ತು ಮಕ್ಕಳ ಕೊಲೆಗಾರನನ್ನು ಹಿಡಿದು ಕೊಲೆಗೆ ನೈಜ ಕಾರಣವನ್ನು ಕಂಡು ಹುಡುಕುವುದರ ಮೂಲಕ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

58 minutes ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

5 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

5 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

6 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

6 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

7 hours ago