ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.7ಕ್ಕೆ ಕಾಯ್ದಿರಿಸಿದೆ.
ಫೆ.20ರಂದು ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವ ಕುರಿತು ಬ್ಯಾಂಕ್ ಪರ ವಕೀಲರು ವಾದ ಮಂಡಿಸಿದರು. ಆರೋಪಿ ಪರ ವಕೀಲರು, ಕಾರನ್ನು ಬ್ಯಾಂಕಿನವರ ವಶಕ್ಕೆ ನೀಡಲು ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು.
ಆದರೆ ವಿಶೇಷ ಸರಕಾರಿ ಅಭಿಯೋಜಕರು, ಕಾರನ್ನು ಬ್ಯಾಂಕಿನವರಿಗೆ ನೀಡಿದರೆ, ಮುಂದೆ ಅವರು ಅದನ್ನು ಮಾರಾಟ ಮಾಡಿದರೆ ಸಾಕ್ಷ್ಯ ವಿಚಾರಣೆಗೆ ತೊಂದರೆ ಆಗುತ್ತದೆ ಎಂಬುದಾಗಿ ಆಕ್ಷೇಪಣೆ ಸಲ್ಲಿಸಿದರು. ಈ ವಾದ ಪ್ರತಿವಾದ ವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಈ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.7ಕ್ಕೆ ಕಾಯ್ದಿರಿಸಿ ಆದೇಶ ನೀಡಿದರು.
ಇದೇ ದಿನ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಅಂತಿಮ ಆದೇಶವನ್ನು ಕೂಡ ನ್ಯಾಯಾಧೀಶರು ನೀಡ ಲಿದ್ದಾರೆ. ಈ ಅರ್ಜಿಗೂ ವಿಶೇಷ ಸರಕಾರಿ ಅಭಿಯೋಜಕರು, ಆಕ್ಷೇಪ ಸಲ್ಲಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…