Featured

ನೇಜಾರು ಹತ್ಯೆ ಪ್ರಕರಣ: ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆ ತೆರವು : ಹೈಕೋರ್ಟ್ ಆದೇಶ – vishwanews24

ನೇಜಾರು ಹತ್ಯೆ ಪ್ರಕರಣ: ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆ ತೆರವು : ಹೈಕೋರ್ಟ್ ಆದೇಶ

ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ.

ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ  ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಉಡುಪಿ ನ್ಯಾಯಾ ಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಪ್ರಕರಣದ ದೂರುದಾರೆ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮುಹಮ್ಮದ್ ನವಾಜ್, ತಡೆಯಾಜ್ಞೆಯನ್ನು ತೆರವುಗೊಳಿಸಿ ವಿಚಾರಣೆಯನ್ನು ಮುಂದುವರೆಸಲು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅನುಮತಿ ನೀಡಿ ಆದೇಶ ನೀಡಿದ್ದಾರೆ. ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಈಗಾಗಲೇ ವರ್ಗಾಯಿಸಲಾಗಿದೆ. ಇದೀಗ ಆರೋಪಿ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಆದರೂ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸುವಾಗ ಜೀವ ಬೆದರಿಕೆ ಎದುರಾ ಗುತ್ತದೆ ಎಂಬ ತಪ್ಪು ಗ್ರಹಿಕೆಯನ್ನು ಮಾಡಲಾಗಿದೆ. ಅದಕ್ಕಾಗಿ ನ್ಯಾಯಾಲಯದ ವಿಚಾರಣೆಯನ್ನು ತಡೆಹಿಡಿಯಲು ಆಗುವುದಿಲ್ಲ. ಆರೋಪಿಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಕೂಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಬಹುದು. ಹೈಕೋರ್ಟ್ ತಡೆಯಾಜ್ಞೆಯಿಂದ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

6 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

7 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

11 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago