ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯಾಕಾಂಡ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಆದೇಶ ನೀಡಿದೆ.
ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಈ ಅರ್ಜಿಯ ಮುಂದಿನ ವಿಚಾರಣೆ ನಡೆಸುವವರೆಗೆ ಉಡುಪಿ ಕೋರ್ಟ್‌ನಲ್ಲಿನ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದರು. ಆ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಜು.18ರಂದು ನಡೆಯಬೇಕಾಗಿದ್ದ ಸಾಕ್ಷಿಗಳ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ನೀಡಿದರು ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭ ಬೆಂಗಳೂರಿನ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…