ಕಾಪು: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.
ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು ರಂಗತರಂಗ ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು.
ಅಶಕ್ತರ ನೆರವಿಗೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು. ಅವರು ದಂಪತಿ ಸಹಿತವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಸಾವಿರಾರು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ.
ಇತ್ತೀಚೆಗೆ ತನ್ನ ಹೊಸ ನಾಟಕ ರಚನೆಯನ್ನು ಮಾಡಿದ್ದ ಇವರು ಅದರಲ್ಲಿ ಯಶಸ್ವಿಯಾಗುವ ಆಶಾಭಾವನೆ ಹೊಂದಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…