Featured

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ – vishwanews24

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ  ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.

ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನಗೌಡರ್ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

12 hours ago