ಬೆಂಗಳೂರು: ಮದುವೆಗೆ ಸೀರಿಯಲ್ ನಟಿ ಒಪ್ಪದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮದನ್ (25) ಮೃತಪಟ್ಟ ಯುವಕ. ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಿವ್ ಇನ್ ಸಂಬಂಧದಲ್ಲಿದ್ದ ಜೋಡಿ ಮಂಗಳವಾರ ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿತ್ತು. ಈ ಪಾರ್ಟಿಯಲ್ಲಿ ಮದನ್ ಗೆಳತಿಯ ಬಳಿ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ. ಆದರೆ ನಟಿ ವೀಣಾ ಮದುವೆಗೆ ಒಪ್ಪದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗೆಳತಿಯ ನಡೆಯಿಂದ ಬೇಸರಗೊಂಡ ಮದನ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯುವಕ ಮದನ್ ಇವೆಂಟ್ ಮ್ಯಾನೇಜ್ ಮೆಂಟ್‌ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದನು. ಈ ವೇಳೆ ಸಿರಿಯಲ್ ಸೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. ವೀಣಾಳನ್ನ ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ ಮದನ್, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು.
ಈ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡತಿ ಸೀರಿಯಲ್ ನಟಿ ವೀಣಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ವೀಣಾ ಧಾರಾವಾಹಿ ಜೊತೆಗೆ ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದಾಳೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…