Featured

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಶಾಸಕನ ಪತ್ನಿ – vishwanews24

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಶಾಸಕನ ಪತ್ನಿ

ಆಂಧ್ರಪ್ರದೇಶ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಪಾದೇವಿ ಅವರನ್ನು ಮೇಡಿಪಲ್ಲಿ ಸತ್ಯಂ 12 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ರೂಪಾದೇವಿ ಮೇಡ್ಚಲ್ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ ಒಂದು ವರ್ಷದಿಂದ ಕೊಂಪಲ್ಲಿ ಪೇಟ್ ಬಶೀರಾಬಾದ್‌ನ ದವೇರಿಯಾ ವಿಲ್ಲಾಸ್‌ನಲ್ಲಿ ನೆಲೆಸಿದ್ದರು. ಆದರೆ, ಒಂದು ತಿಂಗಳ ಹಿಂದೆಯಷ್ಟೇ ಹೈದರಾಬಾದ್‌ನ ಅಲ್ವಾಲ್‌ನ ಪಂಚಶೀಲಾ ಕಾಲೋನಿ ರಸ್ತೆ ಸಂಖ್ಯೆ 12ಕ್ಕೆ ಸ್ಥಳಾಂತರಗೊಂಡಿದ್ದಾರೆ. ಸತ್ಯಂ-ರೂಪಾದೇವಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಗ ಯೋಜಿತ್ (11) ಮತ್ತು ಮಗಳು ರಿಷಿಕಾ ಶ್ರೀ (9).

ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ರೂಪಾದೇವಿ ವೀಡಿಯೋ ಕಾಲ್ ಮಾಡಿ ಶಾಸಕ ಸತ್ಯಂಗೆ ತಾನು ಸಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ತಕ್ಷಣ ಚೊಪ್ಪದಂಡಿಯಿಂದ ಕಾರಿನಲ್ಲಿ ಹೈದರಾಬಾದ್ ಗೆ ಹೊರಟುಬಂದಿದ್ದಾರೆ. ಆದರೆ ಅಲ್ವಾಲ್ ತಲುಪಿದಾಗ ರೂಪಾದೇವಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವು ಕಂಡುಬಂದಿದೆ. ಕೂಡಲೇ ಆಕೆಯನ್ನು ಮನೆ ಸಮೀಪದ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago